transfer; ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಷಡಕ್ಷರಿ ಕೋಲಾರಕ್ಕೆ ವರ್ಗಾವಣೆ

ಶಿವಮೊಗ್ಗ, ನ.08: ಅಧಿಕಾರ ದುರುಪಯೋಗ ಆರೋಪ ಕೇಳಿ ಬಂದ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಷಡಕ್ಷರಿ ಅವರನ್ನು ಕೋಲಾರಕ್ಕೆ ವರ್ಗಾವಣೆ (transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಿವಮೊಗ್ಗದಿಂದ ಕೋಲಾರಕ್ಕೆ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಸ್ಥಾನದಿಂದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
dalit voilence; ದಲಿತರ ಮೇಲಾಗುವ ದೌರ್ಜನ್ಯ ತಡೆಗೆ ಕ್ರಮಗೊಳ್ಳಲು ಎಸ್ ಪಿ ಉಮಾ ಪ್ರಶಾಂತ್ ಸೂಚನೆ
ಷಡಕ್ಷರಿ ಅವರ ವಿರುದ್ಧ ಆರೋಪ ಕೇಳಿ ಬಂದ ತಕ್ಷಣ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಷಡಕ್ಷರಿ ಅವರನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
ಷಡಕ್ಷರಿ ಅವರು ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆಯ ಕೆರೆಯಿಂದ ಮಣ್ಣು ಸಾಗಿಸಿದ್ದು ಸರ್ಕಾರದ ಖಜಾನೆಗೆ ೭೧,೪೫, ೯೨೦ ರೂ. ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

 
                         
                       
                       
                       
                       
                      