murugha shivamurthy sharanaru; ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು

murugha shivamurthy sharanaru

ಚಿತ್ರದುರ್ಗ, ನ.08: ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ (murugha shivamurthy sharanaru) ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬುಧವಾರ ಈ ಸಂಬಂಧ ಆದೇಶ ಪ್ರಕಟಿಸಿತು.

identity card; ರೈತರು ಗುರುತಿನ ಚೀಟಿ ಮಾಡಿಸಿಕೊಳ್ಳಲು ಶಾಸಕ ಕರೆ

ಏಳು ಷರತ್ತುಗಳನ್ನು ವಿಧಿಸಿರುವ ನ್ಯಾಯಪೀಠ, ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು ,2 ಲಕ್ಷ ವೈಯಕ್ತಿಕ ಬಾಂಡ್‌ ನೀಡಬೇಕು,ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು, ಸಾಕ್ಷಿಗಳನ್ನು ಬೆದರಿಸಬಾರದು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು, ಜಾಮೀನು ಮಂಜೂರಾಗಿ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಬಾರದು, ನ್ಯಾಯಾಲಯ ವಿಧಿಸಿದ ಷರತ್ತು ಉಲ್ಲಂಘಿಸಿದರೆ, ಜಾಮೀನು ತನ್ನಿಂದ ತಾನೇ ರದ್ದಾಗಲಿದೆ ಎಂದು ಹೈಕೋರ್ಟ್‌ ಆದೇಶದಲ್ಲಿ ಹೇಳಿದೆ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!