ಮಾ.2ರಂದು ದಾವಣಗೆರೆಯಲ್ಲಿ ಬಾಲವಾಗ್ಮಿ ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ
ದಾವಣಗೆರೆ: ಇದೇ ಮಾ.2ರಂದು ದಾವಣಗೆರೆಗೆ ಆಗಮಿಸಲಿರುವ ಬಾಲವಾಗ್ಮಿ ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಸಂಜೆ 6 ಗಂಟೆಗೆ ಆಂಜನೇಯ ಬಡಾವಣೆಯ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಾಲವಾಗ್ಮಿ ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವರಾಜ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅದೇ ದಿನ ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಯುವಕರ ನಡೆ ಮೋದಿಯ ಕಡೆ ಬೈಕ್ ರ್ಯಾಲಿಯನ್ನು ಸಂಜೆ 4 ಗಂಟೆಗೆ ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದಿಂದ ಆರಂಭಿಸಲಾಗುವುದು. ರ್ಯಾಲಿಯು ಆಂಜನೇಯ ಬಡಾವಣೆಯ ಆಂಜನೇಯ ದೇವಸ್ಥಾನಕ್ಕೆ ಆಗಮಿಸಲಿದೆ. ಇದೇ ಸ್ಥಳದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹಾರಿಕಾ ಮಂಜುನಾಥ್ ಮಾತನಾಡಲಿದ್ದಾರೆ ಎಂದರು.
ಬೈಕ್ ರ್ಯಾಲಿಗೆ ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್ ಚಾಲನೆ ನೀಡಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ಆಯೋಜಕ ಅಥಿತ್ ಅಂಬರ್ಕರ್, ಜಿಲ್ಲಾ ಸಾಮಾಜಿಕ ಮಾಧ್ಯಮ ಸಂಚಾಲಕ ಜಿ.ಕೊಟ್ರೇಶ್ ಗೌಡ, ಕೆ.ಎನ್. ಹನುಮಂತಪ್ಪ ಉಪಸ್ಥಿತರಿದ್ದರು.