ಬಂಟ್ವಾಳ: ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ; ಏಳು ಕೆಜಿ ಹೂತಿಟ್ಟ ಚಿನ್ನ ಪತ್ತೆ

ಬಂಟ್ವಾಳ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಶಾಕಿಂಗ್ ಅಂಶ ಬಯಲಾಗಿದೆ. ಆರೋಪಿಗಳ ವಿಚಾರಣೆ ವೇಳೆ ಸತ್ಯಾಂಶ ಬಾಯಿಬಿಟ್ಟಿದ್ದಾರೆ. ಕಳವುಗೈದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಹೂತಿಟ್ಟಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.
ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಈ ನಡುವೆ ದರೋಡೆಕೋರರು ದರೋಡೆಗೈದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪತ್ತೆ ಮಾಡಲಾಗಿದೆ. ಕಾಸರಗೋಡಿನ ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯನಡ್ಕದಲ್ಲಿರುವ ಬ್ಯಾಂಕ್ ನಿಂದ 4,20,70,000 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ದೋಚುವುದು ಇದರ ಉದ್ದೇಶ ಎಂದು ಪೊಲೀಸರು ಶಂಕಿಸಿದ್ದಾರೆ.
ಕಳೆದ ತಿಂಗಳು 7ರಂದು ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ವಿಶೇಷ ಪೊಲೀಸ್ ತಂಡವು ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡಿತ್ತು. ಅವರಿಂದ ಬಂದ ಮಾಹಿತಿ ಮೇರೆಗೆ ಪೊಲೀಸರು ಸಜಿಂಕಿಲಾಗೆ ಆಗಮಿಸಿ ಚಿನ್ನವನ್ನು ಅಗೆದಿದ್ದಾರೆ ಎಂದು ವರದಿಯಾಗಿದೆ. ಸದ್ಯದಲ್ಲೇ ಈ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಲಿದೆ .

 
                         
                       
                       
                       
                       
                       
                       
                      