ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ನೇಮಕ
ದಾವಣಗೆರೆ: ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ರವರು, ಕೆಪಿಸಿಸಿ ಸಂಹವನ & ಸಾಮಾಜಿಕ ಜಾಲತಾಣದ ಛೇರ್ಮನ್ ರಾದ ಶ್ರೀ ಪ್ರಿಯಾಂಕ ಖರ್ಗೆ ರವರು, ಹಿರಿಯ ಶಾಸಕರಾದ ಶ್ರೀ ಶಾಮನೂರು ಶಿವಶಂಕರಪ್ಪ ರವರು, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಎಸ್. ಮಲ್ಲಿಕಾರ್ಜುನ ರವರು, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್. ಬಿ. ಮಂಜಪ್ಪ ಅವರ ಆದೇಶ ಮೇರೆಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ಅವರನ್ನು ನೇಮಿಸಲಾಗಿದೆ.