ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಾಗರ್ ಎಲ್‍ಎಂಹೆಚ್
ದಾವಣಗೆರೆ :- ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷರಾದ ಸಾಗರ್ ಎಲ್.ಎಂ.ಹೆಚ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭಾಗೆ ನಮ್ಮ ಕ್ಷೇತ್ರದಿಂದ ಮೊಟ್ಟ ಮೊದಲ ಮಹಿಳಾ ಸಂಸದರಾಗಿ ಆಯ್ಕೆಯಾಗುತ್ತಾರೆ, ಈ ನಿಟ್ಟಿನಲ್ಲಿ ಹಗಲು ರಾತ್ರಿ ನಾವು ಪಕ್ಷಕ್ಕೆ ದುಡಿಯುತ್ತೇವೆ ಎಂದು ಹೇಳಿದರು. ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಸಂಘಟನೆ ಮತ್ತು ಅವರ ವ್ಯಕ್ತಿತ್ವ ನೋಡಿ ಪಕ್ಷ ಟಿಕೆಟ್ ನೀಡಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ.
ಪ್ರತಿ ಮನೆ ಮನೆಗೂ ಸಹ ತೆರಳಿ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ಜನರಿಗೆ ತಿಳಿಸುತ್ತಿದ್ದೇವೆ. ನುಡಿದಂತೆ ನಡೆದ ಸರ್ಕಾರ ಎಂದರೆ ನಮ್ಮ ಕಾಂಗ್ರೆಸ್ ಸರ್ಕಾರ ಹೀಗಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಶಕ್ತಿ ಇದಕ್ಕೆ ಸಾರಥಿಯಾಗಿ ಸಚಿವರಾದ ಮಲ್ಲಿಕಾರ್ಜುನ್ ರವರು ಹಾಗೂ ಶಾಸಕರು ಹಾಗೂ ಹಿರಿಯರಾದ ಡಾ. ಶಾಮನೂರು ಶಿವಶಂಕರಪ್ಪ ಮುನ್ನಡೆಸಲಿದ್ದಾರೆ.
ಅವರ ಮಾರ್ಗದರ್ಶನದಲ್ಲಿ ಈ ಚುನಾವಣೆ ನಡೆಯುತ್ತಿದ್ದು ಎಲ್ಲಾ ಮುಖಂಡರು ಸಹ ಡಾ. ಪ್ರಭಾ ಮಲ್ಲಿರ್ಕಾನ್ ಅವರ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಲೆ ಇದೆ, ಜನರು ಸಹ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂದು ಸಾಗರ್ ಎಲ್.ಎಂ.ಹೆಚ್ ತಿಳಿಸಿದರು. ನಾವು ಮಾಡಿದ ಸಾಧನೆ ಸರ್ಕಾರದ ಜಾರಿಗೆ ತಂದ ಯೋಜನೆಗಳೇ ಶ್ರೀ ರಕ್ಷೆಯಾಗಲಿದೆ, ಬಿಜೆಪಿ ಪಕ್ಷದಂತೆ ಒಬ್ಬ ವ್ಯಕ್ತಿ ಹೆಸರಲ್ಲಿ ಮತ ಕೇಳುತ್ತಿಲ್ಲ, ನಮ್ಮ ಸಾಧನೆಗಳನ್ನೇ ನಾವು ಅಸ್ತ್ರವಾಗಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ ಎಂದರು. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ದಲಿತ ಹಿಂದುಳಿದ ಅಲ್ಪಸಂಖ್ಯಾತ ಸೇರಿದಂತೆ ಎಲ್ಲಾ ಸಮಾಜದವರು ಸ್ವಯಂ ಪ್ರೇರಿತವಾಗಿ ಬೆಂಬಲ ನೀಡುತ್ತಿದ್ದಾರೆ ಎಂದರು. ಡಾ. ಪ್ರಭಾ ಮಲ್ಲಿಕಾರ್ಜನ್ ಅವರು ವಿದ್ಯಾವಂತರಿದ್ದಾರೆ, ಎಲ್ಲರನ್ನೂ ಸಮಾನವಾಗಿ ಕಾಣುತ್ತಾರೆ, ಬಡವರು, ಅಶಕ್ತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ದಾಖಲೆ ಬರೆದು ಇತಿಹಾಸ ಸೃಷ್ಟಿಸಲಿದ್ದಾರೆ ಎಂದರು.