ನಾಳೆ ದಾವಣಗೆರೆಗೆ ಪ್ರಿಯಾಂಕ ಗಾಂಧಿ ಆಗಮನ, ಡಾ| ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಬಹಿರಂಗ ಸಭೆ, 1ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ

ದಾವಣಗೆರೆ: ನಾಳೆ ಅಂದರೆ ಮೇ.4 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಮಕ ಗಾಂಧಿ ವಾದ್ರಾ ಆಗಮಿಸಲಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರು ತಿಳಿಸಿದ್ದಾರೆ.
ದಿನಾಂಕ: 04-05-2024 ರಂದು ಮದ್ಯಾಹ್ನ 2-00 ಗಂಟೆಗೆ ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡುವರು. ಪ್ರಿಯಾಂಕ ಗಾಂಧಿ ವಾದ್ರಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆ.ಪಿ.ಸಿ.ಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಆಗಮಿಸಲಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ನಡೆಯುವ ಈ ಬಹಿರಂಗ ಸಭೆಯಲ್ಲಿ ದಾವಣಗೆರೆ ಜಿಲ್ಲೆಯ ಶಾಸಕರುಗಳಾದ ಡಾ|| ಶಾಮನೂರು ಶಿವಶಂಕರಪ್ಪ, ಡಿ.ಜಿ.ಶಾಂತನಗೌಡ, ಶಿವಗಂಗಾ ಬಸವರಾಜ್, ಕೆ.ಎಸ್.ಬಸವಂತಪ್ಪ, ದೇವೆಂದ್ರಪ್ಪ, ಶ್ರೀಮತಿ ಲತಾ ಮಲ್ಲಿಕಾರ್ಜುನ್, ಕೆ.ಸಿ.ಕೊಂಡಯ್ಯ, ನಂದಿಗಾವಿ ಶ್ರೀನಿವಾಸ್, ಅರಸೀಕೆರೆ ಕೊಟ್ರೇಶ್, ಎಸ್.ರಾಮಪ್ಪ, ಪಿ.ಟಿ.ಪರಮೇಶ್ವರ ನಾಯ್ಕ, ಎಐಸಿಸಿ ಮತ್ತು ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಬಹಿರಂಗ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸುಮಾರು 1 ಲಕ್ಷ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.
ಆದ ಕಾರಣ ಕಾಂಗ್ರೆಸ್ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸುವಂತೆ ಕೋರಲಾಗಿದೆ.