ಲೋಕಸಭಾ ಚುನಾವಣೆ ಮತದಾರ ಜಾಗೃತಿಗೆ ಹಾಟ್ ಏರ್ ಬಲೂನ್ ಹಾರಟ

ದಾವಣಗೆರೆ; ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಮೇ.5 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮತದಾನೋತ್ಸವ ಅಂಗವಾಗಿ ಹಾಟ್ ಏರ್ ಬಲೂನ್ ಸಾಹಸ ಕ್ರೀಡೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ಮತದಾರ ಜಾಗೃತಿ ಹಾಟ್ ಏರ್ ಬಲೂನ್‍ಗೆ ಚಾಲನೆ ನೀಡಿದರು. ಚುನಾವಣಾ ಲೆಕ್ಕ ವೀಕ್ಷಕರಾದ ಪ್ರತಿಭಾ ಸಿಂಗ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಪಶುಪಾಲನೆ ಇಲಾಖೆ ಉಪ ನಿರ್ದೇಶಕರು ಡಾ.ಚಂದ್ರಶೇಖರ್ ಸುಂಕದ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ. ಆರ್. ಜಯಲಕ್ಷ್ಮಿ ಬಾಯಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.