ಬೆಂಗಳೂರಿನಲ್ಲಿ ಕೆಲಸ ಸಿಗಲಿಲ್ಲವೆಂದು ಮನನೊಂದು ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಕೆಲಸ ಸಿಗದಿದ್ದಕ್ಕೆ ಪಿ.ಜಿ ಕಟ್ಟಡದ ಮೇಲಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ.

ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕನೊಬ್ಬ ಕೆಲಸ ಹುಡುಕಿಕೊಂಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ. ಆದರೆ, ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿ ವೈಟ್ಫೀಲ್ಡ್ ಠಾಣೆ ಪೊಲೀಸರು ತನಿಖೆ ಶುರುಮಾಡಿದ್ದಾರೆ.


 
                         
                       
                       
                       
                       
                       
                      