ಬಿಜೆಪಿ ಯುವ ಮುಂಖಡ ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಬಂಧನ

praveen

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಕೊಲೆ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್ ಬಳಿ ಬಂಧಿಸಿದ್ದಾರೆ. ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಬಂಧಿತ ಆರೋಪಿ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!