ಹಾಸನ ಲೋಕಸಭಾ ಕ್ಷೇತ್ರ: ಪ್ರಜ್ವಲ್ ರೇವಣ್ಣ ಮುನ್ನಡೆ

ರಾಜ್ಯದ 28 ಕ್ಷೇತ್ರಗಳಲ್ಲಿ ಹಾಸನವು ಈ ಬಾರಿ ಅತಿ ಹೆಚ್ಚು ಗಮನ ಸೆಳೆದ ಕ್ಷೇತ್ರ. ಅದಕ್ಕೆ ಕಾರಣವೂ ಉಂಟು. ಲೋಕಸಭೆ ಚುನಾವಣೆಯ ನಡುವೆ ಭಾರತ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಾಗೂ ಪೆನ್ಡ್ರೈವ್ ಪ್ರಕರಣದ ನಡುವೆಯೇ ಅಲ್ಲಿನ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲ ಇದೀಗ ಹೆಚ್ಚಾಗಿದೆ. ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದಾರೆ.
ಬೆ. 9:30ರ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಹಿನ್ನಡೆ ಇದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯ ಹೊರತು ಇದೀಗ ಹೊರಬೀಳುತ್ತಿರುವ ಫಲಿತಾಂಶ ನೋಡಿದ್ರೆ ಮತದಾರರು ಅಚ್ಚರಿ ಮೂಡಿಸಿದ್ದಾರೆ.