ಜಿಲ್ಲಾ ಕಸಾಪ ದಿಂದ ನೂತನ ಸಂಸದರಿಗೆ ಅಭಿನಂದನೆ

ದಾವಣಗೆರೆ: ಕನ್ನಡ ನಾಡು ನುಡಿಯ ಪರವಾಗಿ ಸದಾ ನಿಲ್ಲುವೆ ಎಂದು ದಾವಣಗೆರೆ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಅವರಿಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು. ನೆನೆಗುದಿಗೆ ಬಿದ್ದಿರುವ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿಯೇ ಅತೀ ಶೀಘ್ರವಾಗಿ ನಡೆಸಲು ಪ್ರಯತ್ನಿಸುವುದಾಗಿ ಸಂಸದರು ಜಿಲ್ಲಾ ಕಸಾಪ ಬಳಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆ ಎನ್ನುವ ಹೆಗ್ಗಳಿಕೆಯನ್ನು ಹೊಂದಿರುವ ತಾವು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸುವಂತೆ ಸಲಹೆ ನೀಡಿದರು. ಈ ಹಿಂದೆ ದಿವಂಗತ ಜೆ.ಹೆಚ್‌.ಪಟೇಲರು ಕೂಡಾ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು ಎಂದು ವಾಮದೇವಪ್ಪ ಸ್ಮರಿಸಿದರು.

ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೂಡ ಈ ಸಂದರ್ಭದಲ್ಲಿ ಅಧ್ಯಕ್ಷೆ ಸುಮತಿ ಜಯಪ್ಪ ಅವರು ಸಂಸದರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಹಾಗೂ ಕಾರ್ಮಿಕ ನಾಯಕ ಕೆ.ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ ಹಾಗೂ ಇತರ ಪದಾಧಿಕಾರಿಗಳಾದ ಎನ್‌.ಎಸ್.ರಾಜು, ಜ್ಯೋತಿ ಉಪಾಧ್ಯಾಯ, ಎಸ್.ಎಂ.ಮಲ್ಲಮ್ಮ, ರುದ್ರಾಕ್ಷಿ ಬಾಯಿ, ನಾಗರಾಜ್ ಸಿರಿಗೆರೆ, ದ್ಯಾಗಿನಕಟ್ಟೆ ಪರಮೇಶ್ವರಪ್ಪ, ಬೇತೂರು ಎಂ.ಷಡಾಕ್ಷರಪ್ಪ, ಆರ್.ಶಿವಕುಮಾರ್, ಪಂಕಜ, ಕುರ್ಕಿ ಸಿದ್ದೇಶ್, ಬಕ್ಕೇಶ್ ಮತ್ತು ಜಿಲ್ಲಾ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ‌.ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಧನ್ಯವಾದಗಳೊಂದಿಗೆ

ಕೆ.ರಾಘವೇಂದ್ರ ನಾಯರಿ
ಗೌರವ ಕೋಶಾಧ್ಯಕ್ಷ
ಜಿಲ್ಲಾ ಕಸಾಪ
ಮೊ: 9844314543

Leave a Reply

Your email address will not be published. Required fields are marked *

error: Content is protected !!