Exclusive: ಎಸ್ ಬಿ ಐ ಹಾಗೂ ಪಿ ಎನ್ ಬಿ ಬ್ಯಾಂಕಿನಿಂದ ಠೇವಣಿ ಹೂಡಿಕೆ ಮಾಡದಂತೆ ಹೊರಡಿಸಿದ್ದ ಆದೇಶಕ್ಕೆ ತಾತ್ಕಾಲಿ ತಡೆ

Sbi and pnb bank Karnataka government temporary relief

ಬೆಂಗಳೂರು: ಭಾರತೀಯ ಸ್ಪೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಹಾಗೂ ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆಗಳನ್ನು ಮಾಡಬಾರದೆಂಬ ಸುತ್ತೋಲೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದರ ಬಗ್ಗೆ ಸೂತ್ತೊಲೆ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು, ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ವಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಮತ್ತು ರೇವಣಿಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವಂತೆ ಸೂಚಿಸಲಾಗಿತ್ತು.

ಎಸ್.ಬಿ.ಐ ಬ್ಯಾಂಕಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ವಿನೋದ್ ಜೈಸ್ವಾಲ್ ರವರು 15 ದಿನಗಳ ಕಾಲಾವಕಾಶವನ್ನು ಕೋರಿ ಮನವಿ ಪತ್ರವನ್ನು ಸಲ್ಲಿಸಿರುತ್ತಾರೆ. ಮುಂದುವರೆದು ದಿನಾಂಕ 16.08.24 ರಂದು ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಯವರು (ಆರ್ಥಿಕ ಇಲಾಖೆ) ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ, ಕೆ.ಎಸ್.ಪಿ.ಸಿ.ಬಿ. ಸಂಸ್ಥೆಯು ನಿಶ್ಚಿತ ಠೇವಣಿಯಲ್ಲಿ ಹೂಡಿರುವ ಹಣವನ್ನು ಮರುಪಾವತಿಸುವ ವಿಷಯವನ್ನು ಇತ್ಯರ್ಥಗೊಳಿಸಲು ತಮ್ಮ ಮನವಿಯನ್ನು ಸಲ್ಲಿಸಿರುತ್ತಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನ ವಿಭಾಗೀಯ ವ್ಯವಸ್ಥಾಪಕರಾದ ಶ್ರೀ ದೀಪಕ್ ಕುಮಾರ್ ಶ್ರೀವಾತ್ಸವ ರವರು ರವರು 15 ದಿನಗಳ ಕಾಲಾವಕಾಶವನ್ನು ಕೋರಿ ಮನವಿ ಪತ್ರವನ್ನು ಸಲ್ಲಿಸಿರುತ್ತಾರೆ ಹಾಗು ದಿನಾಂಕ 16.08.24 ರಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು ಮತ್ತು ಹಿರಿಯ ಅಧಿಕಾರಿಗಳನ್ನು ಬೇಟಿ ಮಾಡಿ ಸಕಾರಾತ್ಮಕವಾಗಿ ಸ್ಪಂದಿಸಿ, ಕೆ.ಐ.ಎ.ಡಿ.ಬಿ. ಸಂಸ್ಥೆಯ ನಿಶ್ಚಿತ ಠೇವಣಿಯನ್ನು ಮರುಪಾವತಿಸುವ ಕುರಿತು ಸಮಯಾವಕಾಶವನ್ನು ಕೋರಿರುತ್ತಾರೆ.

ಎಸ್.ಬಿ.ಐ ಮತ್ತು ಪಿ.ಎನ್.ಬಿ ಬ್ಯಾಂಕ್ ಗಳ ಕೋರಿಕೆಯ ಹಿನ್ನೆಲೆಯಲ್ಲಿ ದಿನಾಂಕ: 12.08.2024 ರಂದು ಹೊರಡಿಸಿರುವ ಸುತ್ತೋಲೆಯನ್ನು 15 ದಿನಗಳವರೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಸರ್ಕಾರದ ಕಾರ್ಯದರ್ಶಿ(ಆ ಮತ್ತು ಸಂ), ಆರ್ಥಿಕ ಇಲಾಖೆ ಡಾ : ಪಿ. ಸಿ. ಜಾಫರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!