ನಾಗರಿಕ ಸೌಹಾರ್ದ ಶಾಂತಿ ಸಭೆಯಲ್ಲಿ ಮೊಳಗಿದ ರಾಷ್ಟ್ರಗೀತೆ ಹಾಗೂ ನಾಡಗೀತೆ
ದಾವಣಗೆರೆ: ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆದ ದಾವಣಗೆರೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾಗರಿಕ ಸೌಹಾರ್ದ ಸಭೆಯಲ್ಲಿ ನಾಡಗೀತೆ ಹಾಗೂ ರಾಷ್ಟ್ರಗೀತೆ ಹಾಡಿದ್ದು ವಿಶೇಷವಾಗಿ ಕಂಡಿತು.
ದಾವಣಗೆರೆ ಪೊಲೀಸ್ ಶಾಲೆ ಹಾಗೂ ಸರ್ಕಾರಿ ಶಾಲೆಯ ಮಕ್ಕಳು ರಾಷ್ಟ್ರಗೀತೆ ಹಾಗೂ ನಾಡಗೀತೆ ಹೇಳಿದರು, ಮಕ್ಕಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಡಿಸಿ,ಎಸ್ ಪಿ, ಸೇರಿದಂತೆ ಸಭೆಗೆ ಆಗಮಿಸಿದ್ದ ಎಲ್ಲಾ ಧರ್ಮೀಯರು ಗೀತೆಗಳನ್ನು ಹಾಡಿ ಸೌಹಾರ್ದತೆ ತೋರುವ ನಿಟ್ಟಿನಲ್ಲಿ ಕಂಡುಬಂದಿದ್ದು ವಿಶೇಷವಾಗಿತ್ತು.
ದಾವಣಗೆರೆ ನಗರ ರಾಜ್ಯದಲ್ಲಿಯೇ ಮಾದರಿ, ಅಭಿವೃದ್ದಿ ಹೊಂದಿದ ನಗರವನ್ನಾಗಿಸಲು ಶಾಂತಿ, ಸೌಹಾರ್ದತೆ ಕಾಪಾಡಿಕೊಂಡು ಒಗ್ಗಟ್ಟಾಗಿ ಧಾರ್ಮಿಕ ಆಚರಣೆಯಲ್ಲಿ ಭಾಗವಹಿಸೋಣ. ಮುಂದಿನ ದಿನಗಳಲ್ಲಿ ಶಾಂತಯುತ ಮೆರವಣಿಗೆ ಮಾಡಲು ಜಿಲ್ಲಾಡಳಿತದಿಂದ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆದ ದಾವಣಗೆರೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾಗರಿಕ ಸೌಹಾರ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂದು ಜಿಲ್ಲಾಧಿಕಾರಿ ಗಳ ಕಛೇರಿಯ ತುಂಗಭದ್ರಾ ಸಂಭಾಗಣದಲ್ಲಿ ನಡೆದ ಸೌಹಾರ್ದ ಸಭೆಯ ಪ್ರಾರಂಭದಲ್ಲಿ ನಡೆದ ನಾಡಗೀತೆ ಹಾಗೂ ಸಭೆಯ ಕೊನೆಯಲ್ಲಿ ನಡೆದ ರಾಷ್ಟ್ರ ಗೀತೆ ಪ್ರಸಾರ ಮಾಡಿರುವುದು ಶ್ಲಾಫನೀಯ .. ದಾವಣಗೆರೆ ಜಿಲ್ಲಾಡಳಿತ ಹಾಗೂ ಪೋಲಿಸ್ ಗೆ ಸಾಮಾಜಿಕ ಕಾರ್ಯಕರ್ತ ಎಂ ಜಿ ಶ್ರೀಕಾಂತ್ ದಾವಣಗೆರೆ ಜಿಲ್ಲಾಡಳಿತಕ್ಕೆ ಹಾಗೂ ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸಿದರು.
ವೇದಿಕೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ಮಂಜುನಾಥ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.