ಆಗಸ್ಟ್ 9 ರಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ನಿಂದ ಕ್ವಿಟ್ ಇಂಡಿಯಾ ಚಳುವಳಿ

ದಾವಣಗೆರೆ: ಕ್ವಿಟ್ ಇಂಡಿಯಾ ಚಳುವಳಿ ಅಂಗವಾಗಿ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹನೀಯರನ್ನು ಸ್ಮರಿಸುವ ಸಲುವಾಗಿ ದಿನಾಂಕ 9-8-2021 ರ ಸೋಮವಾರ ಬೆಳಗ್ಗೆ 11.30 ಕ್ಕೆ ಜಿಲ್ಲಾಧ್ಯಕ್ಷರಾದ ಎಚ್.ಬಿ. ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆಯನ್ನು ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಚರಿಸಲಾಗುವುದು.
ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್ಎಸ್ಯುಐ, ಸೇವಾದಳ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಓಬಿಸಿ, ಅಲ್ಪಸಂಖ್ಯಾತರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ,
ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಎಪಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು,ಮಹಾನಗರ ಪಾಲಿಕೆಯ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಾಗೂ ಸಭೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಕೋರಿದ್ದಾರೆ.