Ashada:ಜು.18ರಿಂದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮಸಮಾವೇಶ

ದಾವಣಗೆರೆ: (Ashada) ಬಾಳೆಹೊನ್ನೂರು ಶ್ರೀ ಮದ್ವೀರಶೈವ ಸದ್ಬೋಧನಾ ಸಂಸ್ಥೆ ಮತ್ತು ಜಿಲ್ಲಾ ಘಟಕದ ಸಹಯೋಗದಲ್ಲಿ ದಾವಣಗೆರೆಯಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮಸಮಾವೇಶ ಕಾರ್ಯಕ್ರಮವು ಜುಲೈ 18ರಿಂದ 20ರವರೆಗೆ ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಜರುಗಲಿದೆ.
ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಿಗ್ಗೆ 8:30 ಕ್ಕೆ ಇಷ್ಟಲಿಂಗ ಪೂಜೆ ಜರಗಲಿದ್ದು, ಸಂಜೆ 6:30ಕ್ಕೆ ನಡೆಯುವ ಜನಜಾಗೃತಿ ಧರ್ಮಸಮಾವೇಶ ಕಾರ್ಯಕ್ರಮದಲ್ಲಿ ಬಾಳೆಹೊನ್ನೂರು ಪೀಠದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನಿಧ್ಯ ಇರಲಿದೆ.
ಜುಲೈ 18ರಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಗೌರವಾಧ್ಯಕ್ಷ ರೇಣುಕಾ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದು, ನೆಗಳೂರು ಹಿರೇಮಠದ ಗುರು ಶಾಂತೇಶ್ವರ ಶಿವಾಚಾರ್ಯ ಶ್ರೀಗಳು ಉಪದೇಶಾಮೃತ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಅ.ಭಾ ಮಹಾಸಭಾ ಉಪಾಧ್ಯಕ್ಷ ಡಾ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಉಪಾಧ್ಯಕ್ಷ ಎಸ್.ಎಸ್. ಗಣೇಶ್, ಉದ್ಯಮಿ ಡಿ.ಡಿ ಬಸವರಾಜಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಪಾಲ್ಗೊಳ್ಳಲಿದ್ದಾರೆ.
ಜುಲೈ 19ರಂದು ಜರುಗುವ ಕಾರ್ಯಕ್ರಮದಲ್ಲಿ ಶ್ರೀ ವಿಮಲ ರೇಣುಕ ವೀರಮಕ್ತಿ ಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದು, ಕೇದಾರಶ್ರೀಗಳ ಅರಿವಿನ ಹಣತೆ ಆಧ್ಯಾತ್ಮಿಕ ಚಿಂತನೆಗಳ ಕೃತಿಯನ್ನು ಮಾಜಿ ಸಂಸದ ಜಿಎಂ ಸಿದ್ದೇಶ್ವರ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಶಾಸಕ ಬಿ.ಪಿ. ಹರೀಶ್, ಮಾಜಿ ಮುಖ್ಯ ಸಚೇತಕ ಎಚ್. ಶಿವಯೋಗಿ ಸ್ವಾಮಿ, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಗಾಯತ್ರಿ ಸಿದ್ದೇಶ್ವರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಜುಲೈ 20ರಂದು ನಡೆಯುವ ಕಾರ್ಯಕ್ರಮದಲ್ಲಿ ಕಣ್ವಕುಪ್ಪೆ ಮಠದ ಮುಮ್ಮಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದು, ಲೆಕ್ಕಪರಿಶೋಧಕ ಡಾ. ಉಮೇಶ್ ಶೆಟ್ಟಿ ಇವರಿಗೆ ಸಾಧನೆ ಶಿಖರ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಾಜಿ ಮೇಯರ್ ಚಮನ್ ಸಾಬ್, ದೂಡಾ ಆಯುಕ್ತ ಹುಲ್ಮನಿ ತಿಮ್ಮಣ್ಣ, ಇನ್ಸೆöÊಟ್ ಮುಖ್ಯಸ್ಥ ಜಿ.ಬಿ. ವಿನಯ್ ಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.