Women and children : ಮಹಿಳಾ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕಾರ್ಯಾಗಾರ “ಉತ್ತಮ ಸಮಾಜ ನಿರ್ಮಾಣಕ್ಕೆ ಶಕ್ತಿ ಮೀರಿ ಶ್ರಮಿಸಿ” ನ್ಯಾಯಾಧೀಶರಾದ ಮಹಾವೀರ್ ಮ. ಕರೆಣ್ಣವರ್

filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 34;
ದಾವಣಗೆರೆ :Women and children : ಸಮಾಜದಲ್ಲಿನ ಬಡತನ, ಸಾಮಾಜಿಕ ಅಸಮತೋಲನ, ಮಾನವ ಕಳ್ಳಸಾಗಾಣಿಕೆ ತಡೆಗಟ್ಟುವ ಸಲುವಾಗಿ ಎಲ್ಲರೂ ಶಕ್ತಿಮೀರಿ ಪ್ರಯತ್ನಿಸೋಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್ ಹೇಳಿದರು.
ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಸಬಲೀಕರಣ, ಸುಧಾರಣಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ “ಮಹಿಳಾ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ” ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆ ಮತ್ತು ಮಕ್ಕಳ ಕಳ್ಳಸಾಗಣೆಯ ಜಾಲವಿಂದು ಹೈಟೆಕ್ ಮಾದರಿ ಪಡೆದಿದೆ. ಇಂದಿನ ಮಕ್ಕಳಿಗೆ ಮೊಬೈಲ್, ಇನ್ನಿತರೆ ಅಗತ್ಯ ವಸ್ತುಗಳ ಬಗ್ಗೆ ಹೆಚ್ಚಿನ ಒಲವಿದೆ. ಇದನ್ನೆ ಬಂಡವಾಳವನ್ನಾಗಿಸಿಕೊಂಡ ಕೆಲವರು ಮಹಿಳೆ ಮತ್ತು ಮಕ್ಕಳಿಗೆ ಆಸೆ ಆಮೀಷ ನೀಡುವ ಮೂಲಕ ಲೈಂಗಿಕ ಶೋಷಣೆಗಾಗಿ, ಮಕ್ಕಳ ಒತ್ತಾಯಪೂರ್ವಕ ಬಿಕ್ಷಾಟನೆಗೆ, ಜೀತಕ್ಕೆ, ಬಾಲಕಾರ್ಮಿಕತೆಗೆ, ಅಂಗಾಂಗ ಕಸಿ, ಬಾಲ್ಯ ವಿವಾಹ ಹಾಗೂ ಮದ್ಯ-ಮಾದಕ ವಸ್ತುಗಳ ಸಾಗಾಟಕ್ಕಾಗಿ ಮಾನವ ಕಳ್ಳಸಾಗಣೆ ಮಾಡಲಾಗುತ್ತಿದೆ. ಇಂತಹ ದುಷ್ಕøತ್ಯಕ್ಕೆ ಕೇವಲ ಮಕ್ಕಳನ್ನು, ಯುವಕರು ವಯಸ್ಕರನ್ನು ಸಹ ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ ಅಧಿಕಾರಿಗಳು ಪ್ರಕರಣಗಳನ್ನು ಬೇಧಿಸುವಲ್ಲಿ ಹದ್ದಿನ ಕಣ್ಣಿಡಬೇಕಾಗಿದೆ.
ವಿಶೇಷವಾಗಿ ಗ್ರಾಮ, ಹೋಬಳಿ ಹಾಗೂ ತಾಂಡಗಳಲ್ಲಿ ಈ ಕುರಿತು ಅರಿವು ಮೂಡಿಸಬೇಕು. ಉತ್ತಮ ಸಮಾಜ ನಿರ್ಮಿಸುವಲ್ಲಿ ತಾವೆಲ್ಲರೂ ಕೈ ಜೋಡಿಸಿ ನದಿ ಪ್ರವಾಹಕ್ಕೆ ವಿರುದ್ಧ ದಿಕ್ಕಿನಲ್ಲಿ ಈಜುತ್ತಿರುವ ಅನಿಷ್ಠ ಪದ್ಧತಿಯ ನಿರ್ಮೂಲನೆಗೆ ಶಕ್ತಿ ಮೀರಿ ಪ್ರಯತ್ನಿಸೋಣ ಎಂದರು.
ಮಕ್ಕಳ ರಕ್ಷಣಾ ಆಯೋಗದ ಸದಸ್ಯರು ಹಾಗೂ ಜಿಲ್ಲಾ ಮಾನವ ಕಳ್ಳ ಸಾಗಾಣಿಕೆ ತಡೆ ಸಮಿತಿ ಸದಸ್ಯ ರೂಪ ನಾಯ್ಕ್ ಮಾತನಾಡಿ, ಮಾನವ ಮತ್ತು ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ.
ಇದು ಶಾಲಾ ಹಂತದಲ್ಲಿಯೇ ಶಾಲೆಯಿಂದ ಹೊರಗುಳಿಯುವುದು, ವಿವಿಧ ಕಾರಣಗಳಿಂದ ಶೋಷಣೆಗೆ ಒಳಗಾಗುವುದು ಸೇರಿದಂತೆ ಹಲವಾರು ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಇಲ್ಲಿ ಮಾನವ ಹಕ್ಕುಗಳು ಬಹುಮುಖ್ಯ ಪಾತ್ರವಹಿಸುತ್ತವೆ. ಆದ್ದರಿಂದ ಸ್ಥಳೀಯ ಆಡಳಿತ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ಶಾಲಾ ಮಟ್ಟದಲ್ಲಿ ಹೆಚ್ಚಿನ ಜಾಗೃತವಹಿಸಿ ಕಾರ್ಯನಿರ್ವಹಿಸಬೇಕಿದೆ.
ನಮ್ಮ ದೇಶವನ್ನು ಮುಂದುವರೆಯುತ್ತಿರುವ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಆದರೆ ಇಂದಿಗೂ ಬಿಕ್ಷಾಟನೆ ದೃಶ್ಯಗಳು ಕಂಡುಬರುತ್ತಿರುವುದಲ್ಲದೇ, ಅಗತ್ಯ ಮೂಲಭೂತ ಸೌಕರ್ಯಗಳಿಲ್ಲ. ಆರ್ಥಿಕ ಮತ್ತು ಸಾಮಾಜಿಕವಾಗಿ ಬಲಹೀನವಾಗಿರುವುದರಿಂದಲೇ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ಸಾರ್ವಜನಿಕರಿಗೆ ಬಡತನ, ನೈಜ ಬದುಕಿನ ಬಗ್ಗೆ ಮತ್ತಷ್ಟು ಅರಿವು ಅಗತ್ಯ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಳ್ಳಸಾಗಾಣೆ, ಬಾಲ್ಯವಿವಾಹ, ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಗ್ರಾಮ ಪಂಚಾಯತ್, ಹಾಗೂ ತಾಲ್ಲೂಕು ಮಟ್ಟದಲ್ಲಿ ಸರ್ಕಾರ ವಿವಿಧ ಸಮಿತಿಗಳನ್ನು ರಚಿಸಿ ಅನುಷ್ಠಾನಗೊಳಿಸಿದೆ. ಈ ಮೂಲಕ ಅಧಿಕಾರಿಗಳು ತಳಮಟ್ಟದಿಂದ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಇಂತಹ ದುಷ್ಕøತ್ಯಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಸಾಧ್ಯವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನನು ಸೇವೆಗಳ ಪ್ರಾಧಿಕಾರ ಸದಸ್ಯ ಮಹಾವೀರ ಮ. ಕರೆಣ್ಣವರ್ ಪ್ರತಿಜ್ಞಾವಿಧಿ ಭೋಧಿಸಿದರು. ವಕೀಲೆ ಅನಿತಾ.ಸಿ.ಪಿ ಮಹಿಳಾ ಮತ್ತು ಮಕ್ಕಳ ಅನೈತಿಕ ಕಳ್ಳಸಾಗಾಣೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಾಗಾರದಲ್ಲಿ ರಾಜ್ಯ ಮಾನವ ಕಳ್ಳಸಾಗಾಣಿಕೆ ಸಮಿತಿ ಸದಸ್ಯ ರಾಜೇಂದ್ರನ್.ಎ. ಜಿಲ್ಲಾ ನಿರೂಪಣಾಧಿಕಾರಿ ಗುರುಪ್ರಸಾದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ಪ್ರಕಾಶ್, ಜಗಳೂರು ಮಹಿಳಾ ಠಾಣೆ ಇನ್ಸ್‍ಪೆಕ್ಟರ್ ಆಶಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.