S S CARE TRUST: ಆಗಸ್ಟ್ 3 ರಂದು ಸಂಕಲ್ಪ ಕೇಂದ್ರಕ್ಕೆ ಶಾಲಿನಿ‌ ರಜನೀಶ್ ಅವರಿಂದ ಚಾಲನೆ

SS Care Trust Drive by Shalini Rajneesh to Sankalpa Kendra on August 3
ದಾವಣಗೆರೆ ( S S CARE TRUST ) ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಐಎಎಸ್ ಬಾಬಾ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಸಂಕಲ್ಪ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಕ್ಕೆ ಆ.3 ರಂದು ಬೆಳಗ್ಗೆ 11.00 ಕ್ಕೆ ಚಾಲನೆ ನೀಡಲಾಗುವುದು ಎಂದು ಎಸ್ ಎಸ್ ಕೇರ್ ಟ್ರಸ್ಟ್ ಹಾಗೂ ಸಂಕಲ್ಪ ತಂಡದವರು‌ ತಿಳಿಸಿದ್ದಾರೆ.
ದಾವಣಗೆರೆಯ ಬಿಐಇಟಿ ಕಾಲೇಜು ಆವರಣದಲ್ಲಿರುವ ಎಸ್ ಎಸ್ ಮಲ್ಲಿಕಾರ್ಜುನ್ ಸಾಂಸ್ಕೃತಿಕ ಸಭಾಂಗಣದಲ್ಲಿ‌ ನಡೆಯುವ‌ ಈ ಸಮಾರಂಭದ ಉದ್ಘಾಟನೆಯನ್ನು ರಾಜ್ಯ‌ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ನೆರವೇರಿಸಲಿದ್ದಾರೆ.ಎಸ್ ಎಸ್ ಕೇರ್ ಟ್ರಸ್ಟ್ ನ ಸಂಸ್ಥಾಪಕ ಟ್ರಸ್ಟಿಗಳು‌ ಹಾಗೂ ಶಾಸಕರಾದ ಶಾಮನೂರು ಶಿವಶಂಕರಪ್ಪ ಉಪಸ್ಥಿತರಿರುವರು.
ಸಂಸದರು ಹಾಗೂ ಲೈಫ್ ಟ್ರಸ್ಟಿಗಳಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮ್ಯಾನೇಜಿಂಗ್ ಟ್ರಸ್ಟಿಗಳಾದ ಎಸ್ ಎಸ್ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ,ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ.ಬಿ.ಡಿ.ಕುಂಬಾರ,ಜಿ.ಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ,ಎಸ್ಪಿ ಉಮಾ‌ಪ್ರಶಾಂತ್,ಐಎಎಸ್ ಬಾಬಾ ಸಂಸ್ಥಾಪಕರಾದ ಎಸ್.ಮೋಹನ್ ಕುಮಾರ್ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿಗಳು

error: Content is protected !!