PDO: ಚಿತ್ರದುರ್ಗದ ಜಿಪಂ ಕಛೇರಿಯಲ್ಲಿ ನಡೆದ ದಿಶಾ ಸಭೆಯಲ್ಲಿ ಗದ್ದಲ ಆರೋಪ.! ಕ್ರಮಕ್ಕೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

ಚಿತ್ರದುರ್ಗ: (PDO) ದಿನಾಂಕ 23/09/2025 ರಂದು ಜಿಲ್ಲಾ ಪಂಚಾಯಿತಿ ಕಛೇರಿಯ ಬಳಿ ದಿಶಾ ಸಭೆ ನಡೆಯುತ್ತಿರುವಾಗ ಎಂ.ಸತೀಶ್ ಕುಮಾರ್ ಎಂಬುವವರು ಅವರ ಸಂಗಡಿಗರೊಂದಿಗೆ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ, ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿಕೊಂಡು ಇಲಾಖೆಗೆ ಮತ್ತು ಇಲಾಖಾ ಅಧಿಕಾರಿಗಳ ಗೌರವಕ್ಕೆ ಚ್ಯುತಿ ಬರುವಂತೆ ನಡೆದುಕೊಂಡು ಸರ್ಕಾರಿ ಸಭೆಯು ಸುಗಮವಾಗಿ ನಡೆಯದಂತೆ ಅಡ್ಡಿ ಪಡಿಸಿದ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಚಿತ್ರದುರ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾನ್ಯ ಶ್ರೀ ಗೋವಿಂದ ಕಾರಜೋಳ, ಸಂಸದರು, ಚಿತ್ರದುರ್ಗ ಲೋಕಸಭಾ ಕ್ಷೇತ್ರ
ರವರ ಅಧ್ಯಕ್ಷತೆಯಲ್ಲಿ ದಿಶಾ ಸಭೆ ನಡೆಯುವಾಗ ಸುಮಾರು 10 ರಿಂದ 15 ಜನರನ್ನು ಕರೆದುಕೊಂಡು ಜಿಲ್ಲಾ ಪಂಚಾಯಿತಿ ಕಛೇರಿಗೆ ಅನುಮತಿ ಇಲ್ಲದೆ ಮುತ್ತಿಗೆ ಹಾಕಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಉಪಕಾರ್ಯದರ್ಶಿಗಳಿಗೆ ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ತೇಜೋವಧೆ ಮಾಡಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು, ಗೌರವಯುತವಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸದಂತೆ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಲ್ಲದೇ ದಾಖಲೆ ರಹಿತವಾಗಿ ಸಲ್ಲಿಸಿರುವ ದೂರುಗಳಿಗೆ ಕ್ರಮವಹಿಸುವಂತ ಘೋಷಣೆಗಳನ್ನು ಕೂಗುತ್ತಾ ಮಾನ್ಯ ಸಂಸದರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಬಂದವರ ಮುಂದೆ ನಮ್ಮ ಪಂಚಾಯತ್ ರಾಜ್ ಇಲಾಖೆಯ ಘನತೆಗೆ ಚ್ಯುತಿ ಬರುವಂತೆ ಹಾಗೂ ಜಿಲ್ಲಾ ಪಂಚಾಯಿತಿ ಘನತೆಗೆ ಚ್ಯುತಿ ಬರುವಂತೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತೇಜೋವಧೆಯನ್ನು ಮಾಡುತ್ತಾ ಸಭಾಂಗಣದಲ್ಲಿ ನಡೆಯುತ್ತಿದ್ದ ದಿಶಾ ಸಭೆಯು ಸುಗಮವಾಗಿ ನಡೆಯದಂತೆ ಕೂಗಾಡುತ್ತಾ ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಡ್ಡಿಪಡಿಸಿರುತ್ತಾರೆ. ಪ್ರಯುಕ್ತ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪಂಚಾಯತ್ ರಾಜ್ ಇಲಾಖೆಯ ಘನತೆಗೆ ಚ್ಯುತಿ ಬರುವಂತ ಹಾಗೂ
ಜಿಲ್ಲಾ ಪಂಚಾಯಿತಿ ಘನತೆಗೆ ಚ್ಯುತಿ ಬರುವಂತೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತೇಜೋವಧೆಯನ್ನು ಮಾಡುತ್ತಾ ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಡ್ಡಿಪಡಿಸುತ್ತಿರುವ ಇವರ ಮೇಲೆ ಕ್ರಿಮಿನಲ್ ಮೊಕದ್ಯಮ ದಾಖಲಿಸಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯ
ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿಯ ಲೆಕ್ಕಾಧಿಕಾರಿಗಳು, ಮಾನ್ಯ ಉಪಕಾರ್ಯದರ್ಶಿಗಳು ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಯಮುಕ್ತವಾಗಿ, ಪ್ರಾಮಾಣಿಕವಾಗಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಲು
ಅನುಕೂಲವಾಗುವಂತಹ ವಾತಾವರಣವನ್ನು ಸೃಷ್ಟಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಈ ಮೂಲಕ ತಮ್ಮಲ್ಲಿ ವಿನಯಪೂರ್ವಕವಾಗಿ ಮನವಿ ಮಾಡಿಕೊಂಡರು.