ನಮ್ಮನ್ನಾಳುವ ಸರ್ಕಾರಗಳಿಗೆ ಸಾರ್ವಜನಿಕರು ಪ್ರಶ್ನೆ ಮಾಡದ ಹಿನ್ನೆಲೆಯಲ್ಲಿ ತಮಗೆ ಬೇಕಾದಂತೆ ಆಡಳಿತ ನಡೆಸುತ್ತಿವೆ – ಆವರಗೆರೆ ಎಚ್.ಜಿ. ಉಮೇಶ್

ದಾವಣಗೆರೆ: ದೇಶಕ್ಕೆ ಸ್ವಾತಂತ್ರ್ಯ ಬಂದು ಇಲ್ಲಿಯವರೆಗೂ ನಮ್ಮನ್ನು ಆಳಿದ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳ ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ ಎಂದು ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ್ ಆಕ್ರೋಶ ವ್ಯಕ್ತಪಡಿಸಿದರು.
ಮೌನೇಶ್ವರ ಬಡಾವಣೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕೊಡಮಾಡುವ ಆಹಾರ ಧಾನ್ಯದ ಕಿಟ್ ಗಳನ್ನು ಕಟ್ಟಡ ಕಾರ್ಮಿಕರಿಗೆ ವಿತರಿಸಿ ಮಾತನಾಡಿದರು. ನಮ್ಮನ್ನಾಳುವ ಸರ್ಕಾರಗಳಿಗೆ ಸಾರ್ವಜನಿಕರು ಪ್ರಶ್ನೆ ಮಾಡದ ಹಿನ್ನೆಲೆಯಲ್ಲಿ ತಮಗೆ ಬೇಕಾದಂತೆ ಆಡಳಿತ ನಡೆಸುತ್ತಿವೆ. ಅಲ್ಲದೇ, ವ್ಯಾಪಕವಾಗಿ ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದಾಗಿ ಹಣದುಬ್ಬರ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬೆಲೆ ನಿಯಂತ್ರಣಕ್ಕೆ ಕೇಂದ್ರ ಮುಂದಾಗಬೇಕೆAದು ಒತ್ತಾಯಿಸಿದರು.
ರಾಜ್ಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅದರಲ್ಲಿನ ಹಣವನ್ನು ದುರುಪಯೋಗ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಸೇಫ್ಟಿ ಕಿಟ್, ಫುಡ್ ಕಿಟ್ ಮತ್ತು ಟೂಲ್ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಆ ಮೂಲಕ ಕಾರ್ಮಿಕ ಇಲಾಖೆಯ ಸಚಿವರು ಮತ್ತು ಉನ್ನತ ಅಧಿಕಾರಿಗಳು ಕೋಟ್ಯಂತರ ರೂ ಹಣವನ್ನು ಲೂಟಿ ಹೊಡೆಯುತ್ತಿದ್ದಾರೆ. ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡದೆ ಜನಪ್ರತಿನಿಧಿಗಳು ಸೂಚಿಸಿರುವ ಪಟ್ಟಿಗೆ ಅನುಗುಣವಾಗಿ ಅರ್ಹರು ಸೇರಿದಂತೆ ಅರ್ಹರಲ್ಲದವರಿಗೂ ಈ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಎಂದು ಆಪಾದಿಸಿದರು.
ಸೇಫ್ಟಿ ಕಿಟ್, ಫುಡ್ ಕಿಟ್ ಮತ್ತು ಟೂಲ್ ಕಿಟ್ ವಿತರಣೆಯಲ್ಲಿ 10,800 ಕೋಟಿ ರೂ., ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಆ ಮೂಲಕ ಕಲ್ಯಾಣ ಮಂಡಳಿಯ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲ್ಯಾಣ ಮಂಡಳಿಯಿಂದ ನೀಡಲಾಗುತ್ತಿರುವ ಸಹಾಯಧನ ಮತ್ತು ಪರಿಹಾರ ಧನದಲ್ಲಿ ಸಾವು ಮತ್ತು ಹೆರಿಗೆ ಕ್ರಮಗಳಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಎಲ್ಲದಕ್ಕೂ ಏಕರೂಪದ ಪರಿಹಾರ ನಿರ್ಧಾರ ಗೊಳಿಸಬೇಕು. ಅಲ್ಲದೆ ಇಎಸ್ ಐ, ಇಪಿಎಫ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಟ್ಟಡ ಕಾರ್ಮಿಕರಿಗೆ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಪಿ ಕೆ ಲಿಂಗರಾಜು ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸೌಲಭ್ಯ ಕೊಡಿಸುವುದಾಗಿ ಕೆಲವು ಎನ್ಜಿಒಗಳು ಕಟ್ಟಡ ಕಾರ್ಮಿಕರಲ್ಲದವರಿಗೂ ಗುರುತಿನ ಚೀಟಿಗಳನ್ನು ನೀಡುತ್ತಿದ್ದಾರೆ. ಇದರಿಂದಾಗಿ ಬೋಗಸ್ ಕಾರ್ಡ್ಗಳು ಹೆಚ್ಚಾಗಿವೆ. ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ವಿ.ಲಕ್ಷ್ಮಣ್, ಜಿ.ಆರ್. ನಾಗರಾಜ್, ಶಿವಕುಮಾರ್ ಶೆಟ್ಟರ್, ಚಂದ್ರಶೇಖರ್, ಹಾಲೇಶ್ ಸೇರಿದಂತೆ ಇತರರು ಇದ್ದರು.