ಮೈಸೂರು ಮಾನಸಗಂಗೋತ್ರಿ ಆವರಣದಲ್ಲಿ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದು ಕೂರುವುದು ನಿಷೇಧ

ಮೈಸೂರು: ಮೈಸೂರಿನಲ್ಲಿ ಇತ್ತೀಚಿಗೆ ವಿದ್ಯಾರ್ಥಿನಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಹಿನ್ನೆಲೆಯಲ್ಲಿ ಮಾನಸಗಂಗೋತ್ರಿ ಹಾಗೂ ಕುಕ್ಕರಹಳ್ಳಿಕೆರೆ ಅವರಣ ಸುತ್ತಮುತ್ತ 6:36 ಪ್ರವೇಶವನ್ನು ಸುರಕ್ಷಿತ ದೃಷ್ಟಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಆದೇಶ ಹೊರಡಿಸಿದ್ದಾರೆ.
ವಿದ್ಯಾನಿಲಯದಲ್ಲಿನ ಭದ್ರತಾ ಅಧಿಕಾರಿಗಳು ಪ್ರತಿದಿನ ಸಂಜೆ 6 ಗಂಟೆ ಇಂದ ರಾತ್ರಿ 9 ಗಂಟೆಯವರೆಗೆ ಗಸ್ತು ತಿರುಗಲು ಸೂಚಿಸಲಾಗಿದೆ ಹಾಗೂ ಮಾನಸಗಂಗೋತ್ರಿ ಆವರಣದಲ್ಲಿಯೂ 6:30 ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದು ಕೂರುವುದು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ
ಈ ಕ್ರಮವನ್ನು ಪೊಲೀಸ್ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ