ನಾವೆಲ್ಲ ಒಗ್ಗಟ್ಟಾಗಿದ್ದೇವೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ನಗರಾಭಿವೃದ್ಧಿ ಸಚಿವ: ಬಿ.ಎ. ಬಸವರಾಜ
ದಾವಣಗೆರೆ: ನಮ್ಮಲ್ಲಿ ಯಾವ ಭಿನ್ನಭಿಪ್ರಾಯ ಇಲ್ಲ , ನಾವೆಲ್ಲಾ ಒಗ್ಗಟ್ಟಾಗಿದ್ದೇವೆ . ಮುನಿರತ್ನ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದರು. ಈಗ ಸಚಿವ ಸ್ಥಾನ ಸಿಕ್ಕಿದೆ. , ಸೋಮಶೇಖರ್ ಮುನಿರತ್ನ ಮತ್ತು ನಾನು ಒಟ್ಟಿಗೆ ಕುಳಿತು ಚರ್ಚಿಸಿದ್ದೇವೆ. ಮುಂದೆ ಕೂಡ ಭಾರತೀಯ ಜನತಾ ಪಕ್ಷ ಅಧಿಕಾರ ತರುವಲ್ಲಿ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸ್ಪಷ್ಟೀಕರಣ ನೀಡಿದರು .
ದಾವಣಗೆರೆ ಖಾಸಗಿ ಹೋಟೆಲೊಂದರಲ್ಲಿ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ನಮ್ಮ ನಾಯಕರು ಅದರಲ್ಲಿ ಎರಡು ಮಾತಿಲ್ಲ. ಹಿರಿಯರು, ಪಕ್ಷವನ್ನು ಹಗಲಿರುಳು ಕಷ್ಟಪಟ್ಟು ಕಟ್ಟಿದ್ದಾರೆ. ಈಗ ಮತ್ತೆ ಪಕ್ಷ ಸಂಘಟನೆ ಮಾಡಲು ಹೊರಟರೆ ನಾವೆಲ್ಲರೂ ಸಹಕಾರ ನೀಡುತ್ತೇವೆ. ಪಕ್ಷದ ಹೈಕಮಾಂಡ್ ಎಲ್ಲಿಯೂ ಯಾವುದನ್ನು ಬೇಡ ಎಂದು ಹೇಳುವುದಿಲ್ಲ
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಿಎಂ, ಗೃಹ ಸಚಿವರು ಈ ಬಗ್ಗೆ ಮಾಹಿತಿ ನೀಡುತ್ತಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದರು
ಸರ್ಕಾರವು ಮಹಿಳಾ ರಕ್ಷಣೆಗೆ ಸಿದ್ದ ಎಂದು ಹೇಳಿದರು