ಚಿಗಟೇರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಹಾಗೂ ಎಮ್.ಐ.ಸಿ.ಯು ವಾರ್ಡ್ ನ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಶುಕ್ರವಾರ ನಗರದ ಸಿ.ಜೆ.ಆಸ್ಪತ್ರೆಯಲ್ಲಿ ಸಿದ್ದಗೊಳ್ಳುತ್ತಿರುವ 1 ಹಾಗೂ 2 ಸಾವಿರ ಲೀ., ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್, ಎಮ್.ಐ.ಸಿ.ಯು ವಾರ್ಡ್ ನ ಸಿವಿಲ್ ಕಾಮಗಾರಿಗಳನ್ನು ವೀಕ್ಷಿಸಿದರು.
ಅತ್ಯಂತ ಹಳೆಯದಾದ ಸರ್ಕಾರಿ ಹೈಸ್ಕೂಲ್ ನ ನವೀಕರಣ ಕಾಮಗಾರಿಯನ್ನು ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಸ್ಮಾರ್ಟ್ ಸಿಟಿ ವತಿಯಿಂದ ಮಾಡಲಾಗುತ್ತಿದ್ದು, ಅತ್ಯಂತ ಜೋಪಾನದಿಂದ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಗುರುಭವನ ರಸ್ತೆ,ಸಿ.ಸಿ.ಕ್ಯಾಮೆರಾಗಳ ಅಳವಡಿಕೆ ಕಾಮಗಾರಿಗಳನ್ನು ವೀಕ್ಷಿಸಿದರು.
ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದಜ್ಜಿ, ಸ್ಮಾರ್ಟ್ ಸಿಟಿ ಎಂಡಿ ರವೀಂದ್ರ ಮಲ್ಲಾಪುರ ಇದ್ದರು.