B.ed admission: ಬಿ.ಇಡಿ ದಾಖಲಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಕೇಂದ್ರೀಕೃತ ದಾಖಲಾತಿ ಘಟಕ ಬೆಂಗಳೂರು ಇವರಿಂದ ಅರ್ಹ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸೆ.23 ರಿಂದ ಅ.13 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ನಮೂನೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಇತರೆ ಮಾಹಿತಿಗಳನ್ನು ವೆಬ್ ಸೈಟ್
www.schooleducation.kar.nic.in ನಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ದಾವಣಗೆರೆ ದೂ.ಸಂ: 08192-231156 ಅನ್ನು ಸಂಪರ್ಕಿಸಬಹುದೆAದು ಪ್ರಾಚಾರ್ಯರು ಹಾಗೂ ಪದನಿಮಿತ್ತ ಡಯಟ್ ಉಪನಿರ್ದೇಶಕರು ತಿಳಿಸಿದ್ದಾರೆ.