ವಾಕ್ಥಾನ್ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ಕೊಟ್ಟ ಡಿಸಿ, ಎಸ್ಪಿ

ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ವಿವಿಧ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಏರ್ಪಡಿಸಿದ ವಾಕ್ಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ರಿಷ್ಯಂತ್ ಅವರು ಡೊಳ್ಳು ಬಾರಿಸುವ ಮೂಲಕ ಗುರುಭವನ ಬಳಿ ಚಾಲನೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಸೆ. 29 ರಿಂದಲೇ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಆರಂಭವಾಗಿದ್ದು, ಇದರ ಮುಂದುವರೆದ ಭಾಗವಾಗಿ, ಗುರುವಾರ ನಗರದಲ್ಲಿ ವಾಕ್ಥಾನ್ ಏರ್ಪಡಿಸಲಾಯಿತು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೊಳ್ಳು ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೀರಗಾಸೆ ಸೇರಿದಂತೆ ಹಲವು ಸಾಂಸ್ಕೃತಿಕ ತಂಡಗಳು ಭಾಗವಹಿಸಿದ್ದವು. ವಾಕ್ಥಾನ್ ನಗರದ ಗುರುಭವನ ಬಳಿ ಆರಂಭವಾಗಿ, ವಿವಿಧೆಡೆ ಸಂಚರಿಸಿದ ಬಳಿಕ ಗುರುಭವನ ಬಳಿಯೇ ಪೂರ್ಣಗೊಂಡಿತು.
ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕರು ಉಪಸ್ಥಿತರಿದ್ದರು.
ಡೊಳ್ಳು ಬಾರಿಸಿದ ಡಿಸಿ, ಎಸ್ಪಿ!
