ಗಾಂಜಾ ವ್ಯಸನಕ್ಕೇ ಇನ್ನಾದರೂ ಬೀಳುತ್ತಾ ಕಡಿವಾಣ.!ಪೊಲೀಸರ ಈ ವಿಶೇಷ ಪ್ರಯತ್ನ ಫಲ ನೀಡುತ್ತಾ.?ವಿಶೇಷ ಟೆಸ್ಟಿಂಗ್ ಕಿಟ್ ನಿಂದ ಗಾಂಜಾ ವ್ಯಸನಿ.!

ದಾವಣಗೆರೆ: ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲೇ ಅತಿ ಹೆಚ್ಚು ಗಾಂಜಾ ಪ್ರದೇಶ ಎಂಬ ಕುಖ್ಯಾತಿಯನ್ನು ಪಡೆದುಕೊಂಡಿದೆ. ರಾಜ್ಯದ ಇತರೆ ಜಿಲ್ಲೆಗಳು ಸೇರಿದಂತೆ, ಹೊರ ರಾಜ್ಯಗಳಿಗೂ ಇಲ್ಲಿಂದ ಗಾಂಜಾ ರವಾನೆಯಾಗುತ್ತೆ. ಪೊಲೀಸರು ಎಷ್ಟೇ ಪ್ರಯತ್ನ ಪಟ್ಟರೂ ಈ ಅಕ್ರಮಕ್ಕೆ ಸಂಪೂರ್ಣ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಗಾಂಜಾ ಸೇವನೆ ಮಾಡುವವರೇನು ಕಡಿಮೆ ಇಲ್ಲ. ಅದರಲ್ಲೂ ಹೆಚ್ಚಿನ ಸಂಖ್ಯೆಯ ಯುವಕರು ಗಾಂಜಾಗೆ ದಾಸರಾಗುತ್ತಿದ್ದಾರೆ.
ಕಾಲೇಜು ಆವರಣಕ್ಕೂ ಕಾಲಿಟ್ಟಿದೆ ಈ ಗಾಂಜಾ ಘಮಲು: ಜಿಲ್ಲೆಯಲ್ಲಿ ಗಾಂಜಾ ವ್ಯಸನಿಗಳ ಸಂಖ್ಯೆ, ಗಾಂಜಾ ವ್ಯಾಪಾರ ಹೆಚ್ಚಳವಾಗುತ್ತಿದೆ ಎಂಬುದಕ್ಕೆ ಒಂದೆರಡು ವರ್ಷದಲ್ಲಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳು ಮತ್ತು ವಶ ಪಶಪಡಿಸಿಕೊಂಡಿರುವ ಗಾಂಜಾ ಪ್ರಮಾಣವೇ ತಿಳಿಸುತ್ತೇ. ಜಿಲ್ಲೆಯಲ್ಲಿ ನಡೆಯುವ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೂ ಗಾಂಜಾ ಸೇವನೆ ಮಾಡಿಯೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ.
ಗಾಂಜ ಟೆಸ್ಟಿಂಗ್ ಕಿಟ್: ಗಾಂಜಾ ಸೇವನೆ ಮಾಡುವವರಿಗೆ ಶಿಕ್ಷೆ ಕೊಡಿಸುವುದರ ಜೊತೆಗೆ ಗಾಂಜಾ ಅಕ್ರಮ ದಂಧೆಗೆ ಕಡಿವಾಣ ಹಾಕಲು ಸಿದ್ಧರಾಗಿದ್ದಾರೆ. ಇದಕ್ಕಾಗೆ ಮಾದಕ ದ್ರವ್ಯ ವ್ಯಸನಿಗಳ ಮೇಲೆ ನಿಗಾಹಿರಿಸುವ ಉದ್ದೇಶದಿಂದ ವಿಶೇಷ ಟೆಸ್ಟಿಂಗ್ ಕಿಟ್ ಅನ್ನು ಪೊಲೀಸರಿಗೆ ವಿತರಿಸಲಾಗಿದೆ. ಈ ಕಿಟ್ ನ ಸಹಾಯದಿಂದ ಮಾದಕ ದ್ರವ್ಯವನ್ನು ಸೇವನೆ ಮಾಡಿದ ವ್ಯಕ್ತಿಗಳ ಮೂತ್ರವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೂಡಲೇ ಫಲಿತಾಂಶವನ್ನು ನೀಡುತ್ತದೆ. ಪರೀಕ್ಷೆ ವೇಳೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದ ವ್ಯಕ್ತಿಗಳ ವಿರುದ್ಧ ಕಲಂ 27(ಬಿ) ಎನ್ ಡಿ ಪಿ ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಕಾಯ್ದೆ ಅಡಿಯಲ್ಲಿ ಆರೋಪಿತರಿಗೆ 10 ಸಾವಿರ ದವರೆಗೆ ದಂಡ ಮತ್ತು 6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ.
ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರು ವಿಶೇಷ ಕಿಟ್ ನ ಮೂಲಕ ಕಾರ್ಯಚರಣೆ ಆರಂಭಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿದ್ದು, ಸದರಿ ವ್ಯಕ್ತಿಗಳ ಪರೀಕ್ಷಾ ವರದಿಯು ಪಾಸಿಟಿವ್ ಸಹ ಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಗಾಂಜಾ ವ್ಯಸನಿಗಳಿಗೆ ಹಿಡುಮುಡಿ ಕಟ್ಟಲು ಪೊಲೀಸರು ಸಜ್ಜಾಗಿದ್ದಾರೆ.