GMIT & ICT: ಪ್ರತಿಶ್ಟಿತ ಐಸಿಟಿ ಅಕಾಡೆಮಿ ಜೊತೆ ಒಡಂಬಡಿಕೆ ಮಾಡಿಕೊಂಡ ಜಿ ಎಂ ಐ ಟಿ ಕಾಲೇಜು

IMG-20211004-WA0027

 

ದಾವಣಗೆರೆ: ನಗರದ ಪ್ರತಿಷ್ಠಿತ ಜಿ ಎಂ ತಾಂತ್ರಿಕ ಮಹಾವಿದ್ಯಾಲಯವು ಇತ್ತೀಚಿಗೆ ನಡೆದ ಬೆಳವಣಿಗೆಯಲ್ಲಿ ಐಸಿಟಿ ಅಕ್ಯಾಡೆಮಿ ಜೊತೆಗೆ ಒಡಂಬಡಿಕೆಯನ್ನು ಮಾಡಿಕೊಂಡಿದೆ.

ಐಸಿಟಿ ಅಕಾಡೆಮಿಯು ಭಾರತ ಸರ್ಕಾರದ ಅಡಿಯಲ್ಲಿ ಮತ್ತು ರಾಜ್ಯ ಸರ್ಕಾರಗಳ ಸಹಯೋಗ ಮತ್ತು ಕೈಗಾರಿಕೆಗಳ ಸಹಕಾರದಿಂದ ರೂಪಿತವಾದ ಒಂದು ಲಾಭರಹಿತ ಸಂಸ್ಥೆಯಾಗಿದೆ. ಮುಂದಿನ ಪೀಳಿಗೆಯ ಪ್ರತಿಭೆಗಳನ್ನು ರೂಪಿಸಲು ಈ ಸಂಸ್ಥೆಯು ಜಿಎಂಐಟಿ ಕಾಲೇಜಿನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದೆ. ಜಿಎಂಐಟಿ ತಾಂತ್ರಿಕ ಮಹಾವಿದ್ಯಾಲಯದಿಂದ ಅನೇಕ ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಅವುಗಳಲ್ಲಿ ಕೈಗಾರಿಕೆ ಮತ್ತು ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಚಟುವಟಿಕೆಗಳು, ಮುಂದಿನ ಪೀಳಿಗೆಯ ಅಧ್ಯಾಪಕರು ಗಳನ್ನು ಮತ್ತು ವಿದ್ಯಾರ್ಥಿಗಳನ್ನು ರೂಪಿಸುವ ಬಗ್ಗೆ, ಕೈಗಾರಿಕೆಗಳಿಗೆ ಬೇಕಾದ ಕೌಶಲ್ಯತೆ ಗಳನ್ನು ತರಬೇತಿ ಕೊಡುವುದರ ಮೂಲಕ ವಿದ್ಯಾರ್ಥಿಗಳನ್ನು ಕೈಗಾರಿಕೆಗಳಿಗೆ ಸಿದ್ಧಗೊಳಿಸುವುದು, ಅಧ್ಯಾಪಕರು ಗಳನ್ನು ಮತ್ತು ವಿದ್ಯಾರ್ಥಿಗಳನ್ನು ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ತೊಡಗಿಸುವುದು, ಯುವ ಸಬಲೀಕರಣ ಮತ್ತು ಕೈಗಾರಿಕೋದ್ಯಮಿ ಗಳನ್ನಾಗಿ ತಯಾರು ಮಾಡುವುದು ಮುಂತಾದವುಗಳಾಗಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಒಡಂಬಡಿಕೆಯಿಂದ ಅಧ್ಯಾಪಕರುಗಳ ಬುದ್ಧಿ ಮಟ್ಟ ಮತ್ತು ವಿದ್ಯಾರ್ಥಿಗಳ ಕೈಗಾರಿಕಾ ಕೌಶಲ್ಯತೆ ಗಳನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಉದ್ಯೋಗವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಸಹಕಾರಿಯಾಗಿದೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಶ್ಚಂದ್ರ, ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್, ಐಸಿಟಿ ಅಕ್ಯಾಡಮಿ ದಾವಣಗೆರೆ ವಿಭಾಗದ ಸಂಯೋಜಕರಾದ ಶ್ರೀ ಜಕಉಲ್ಲಾ ಎಂ ಎಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾದ ಡಾ ಪ್ರವೀಣ್ ಜೆ ಮುಂತಾದವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!