Amruth : ‘ಆಜಾದೀ ಕಾ ಅಮೃತ್ ಮಹೋತ್ಸವ’ ಔತಣಕೂಟದಲ್ಲಿ ರಾಜ್ಯದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಭಾಗಿ

ಉತ್ತರ ಪ್ರದೇಶ: ಲಖನೌನಲ್ಲಿ ಈಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ‘ಆಜಾದೀ ಕಾ ಅಮೃತ್ ಮಹೋತ್ಸವ’ ದಲ್ಲಿ ಕೇಂದ್ರ ಸರ್ಕಾರದ ಆಹ್ವಾನದ ಮೇರೆಗೆ ರಾಜ್ಯದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೂ ಮುನ್ನ ದಿನವಾದ ನಿನ್ನೆ ಸೋಮವಾರ ರಾತ್ರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್, ಕೇಂದ್ರ ವಸತಿ, ನಗರ ವ್ಯವಹಾರಗಳು, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.