By Election Hanagal Singagi: ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಹೈ ಕಮಾಂಡ್

ಬೆಂಗಳೂರು: ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.
ಸಿಂದಗಿ ಕ್ಷೇತ್ರಕ್ಕೆ ರಮೇಶ್ ಭೂಸನೂರು ಹಾಗೂ ಹಾನಗಲ್ ಕ್ಷೇತ್ರಕ್ಕೆ ಶಿವರಾಜ್ ಸಜ್ಜನ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗುಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರಿಗೆ ಟಿಕೆಟ್ ನೀಡಲಾಗಿದ್ದು, ಚುನಾವಣಾ ಕಣದಲ್ಲಿ ಜಿದ್ದಾ ಜಿದ್ದಿ ಏರ್ಪಟ್ಟಿದೆ.