ಹಾನಗಲ್ ಕ್ಷೇತ್ರದ ಅಭ್ಯರ್ಥಿ ಪರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಘ್ ಸುರ್ಜೇವಾಲ ಪ್ರಚಾರ

ಹಾನಗಲ್: ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಕೊಪ್ಪರಸಿಕೊಪ್ಪದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಯವರ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಎಐಸಿಸಿ ಪ್ರ.ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಮಾದ್ಯಮ ವಕ್ತಾರರು ಹಾಗೂ ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ಅವರು ಭಾಗವಹಿಸಿದರು.
ಮಾಜಿ ಸಚಿವರಾದ ಶ್ರೀ ಎಚ್.ಕೆ ಪಾಟೀಲ್, ಶ್ರೀ ಅಲ್ಲಂ ವೀರಭದ್ರಪ್ಪ , ಶ್ರೀ ಮನೋಹರ್ ತಹಶೀಲ್ದಾರ್, ಡಿಸಿಸಿ ಅಧ್ಯಕ್ಷರಾದ ಹಿರೇಮಠ್, ಮಾಜಿ ಶಾಸಕರಾದ ಶ್ರೀ ಬಿ.ಆರ್ ಪಾಟೀಲ್, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀಮತಿ ಪುಷ್ಪಾ ಅಮರನಾಥ್ ಮೊದಲಾದವರು ಉಪಸ್ಥಿತರಿದ್ದರು.