ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ರೇಣುಕಾಚಾರ್ಯ.! 15 ದಿನ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ದಾವಣಗೆರೆ: ಕಳೆದ ವಿಧಾನ ಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿರುವ ಕಾರಣ ಶಸ್ತ್ರಚಿಕಿತ್ಸೆಗಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾಸಕ ಡಾ. ಶಿವರಾಜ್ ಪಾಟೀಲ್ ಅವರ ಮಾರ್ಗದರ್ಶನ ಹಾಗೂ ಡಾ. ವಿಜಯ್ ಶೆಟ್ಟಿ ನೇತೃತ್ವದ ತಂಡ ಸರ್ಜರಿ ನಡೆಸಿದೆ ಎಂದು ರೇಣುಕಾಚಾರ್ಯ ತಮ್ಮ ಎಫ್ ಬಿ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಹೊನ್ನಾಳಿ-ನ್ಯಾಮತಿ ಕ್ಷೇತ್ರದ ಜನರು ತಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ತಮ್ಮ ಆಪ್ತ ಸಹಾಯಕರಿಗೆ ತಿಳಿಸುವಂತೆ ಆಸ್ಪತ್ರೆಯಿಂದಲೇ ಸಂದೇಶ ರವಾನಿಸುವ ಮೂಲಕ ಮನವಿ ಮಾಡಿದ್ದಾರೆ.