GMHPU Best Leader: “ಜಿ ಎಂ ಎಚ್ ಪಿ ಯು ನಲ್ಲಿ ಅತ್ಯುತ್ತಮ ನಾಯಕತ್ವ ಪ್ರಶಸ್ತಿಯ ವರ್ಣರಂಜಿತ ಸಮಾರಂಭ

ದಾವಣಗೆರೆ: ನಗರದ ಪ್ರತಿಷ್ಠಿತ ಜಿ ಎಂ ಎಚ್ ಪಿ ಯು ನಲ್ಲಿ ಅಕ್ಟೋಬರ್ 28 ನೇ ಗುರುವಾರದಂದು ನಡೆದ ಅತ್ಯುತ್ತಮ ನಾಯಕತ್ವ ಪ್ರಶಸ್ತಿ ಸಮಾರಂಭವನ್ನು ಕರ್ನಾಟಕ ಸರ್ಕಾರದ ಮಾನ್ಯ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ರವರು ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ಅತ್ಯುತ್ತಮ ಶಿಕ್ಷಕರುಗಳಿಗೆ ಮತ್ತು ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡುವುದರ ಮೂಲಕ ಗೌರವವನ್ನು ಸೂಚಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಿಕ್ಷಣ ಸಚಿವರು, ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು, ಈ ಪ್ರಶಸ್ತಿಗಳ ಮೂಲಕ ಅತ್ಯುತ್ತಮ ಶಿಕ್ಷಕರ ಗಳು ಮತ್ತು ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಅವರ ಮುಂದಿನ ಯೋಜನೆಗಳಿಗೆ ಬುನಾದಿಯಾಗಿದೆ ಎಂದು ತಿಳಿಸಿದರು. ಉಪ ವಿಭಾಗಾಧಿಕಾರಿಯಾದ ಶ್ರೀಮತಿ ಮಮತಾ ಹೊಸಗೌಡರ್ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಂತರ ಕೆಎಎಸ್ ಪರೀಕ್ಷೆ ಬರೆದು ಹೆಚ್ಚು ಅಂಕ ಗಳಿಸಿ ಇಂದು ದಾವಣಗೆರೆ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ತಮ್ಮೆಲ್ಲರಿಗೆ ಮಾದರಿಯಾಗಿದ್ದಾರೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿಜ್ಞಾನ ವಿಭಾಗದ
ವಿದ್ಯಾರ್ಥಿಗಳಾದ ಶ್ವೇತಾ ಹೆಚ್, ರುಮನ್ ಮಲ್ಲಿಕ್, ಭಾಗ್ಯ ಯು ಆರ್, ವಾಣಿಜ್ಯ ವಿಭಾಗದಿಂದ ಕರಣ್ ಎ ಕಲಾಲ್, ಪವಿತ್ರ ಆರ್ ಪಿ, ಕಾವ್ಯ ಎನ್ ಆರ್ ಇವರುಗಳಿಗೆ ಪ್ರಶಸ್ತಿಯನ್ನು ವಿತರಿಸಲಾಯಿತು. ಹಾಗೆಯೇ ಸಿಇಟಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಸಂತೋಷಿನೀ ವಿ, ಶ್ವೇತಾ ಹೆಚ್, ರುಮನ್ ಮಲ್ಲಿಕ್ ಮತ್ತು ಜೆಇಇ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ತೌಸಿಫ್, ವಿಶೃತ್ ಇವರು ಗಳಿಗೂ ಸಹ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರುಗಳಿಗೂ ಇದೇ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಂತರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಾನ್ಯ ಬಿ ಸಿ ನಾಗೇಶ್, ಜಿಎಂ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರುಗಳಾದ ಶ್ರೀ ಅನೀತ್ ಕುಮಾರ್ ಜಿ ಎಸ್, ಜಿ ಎಂ ಎಚ್ ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟ ರಾಯುಡು ವಿ, ದಾವಣಗೆರೆ ಉಪವಿಭಾಗಾಧಿಕಾರಿ ಗಳಾದ ಶ್ರೀಮತಿ ಮಮತಾ ಹೊಸಗೌಡರ್, ಡಿಡಿಪಿಐ ಶ್ರೀ ಪರಮೇಶ್ವರಪ್ಪ ಸಿಆರ್, ದಾವಣಗೆರೆ ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಕೊಟ್ರೇಶ್ ಜಿ, ದಾವಣಗೆರೆ ದಕ್ಷಿಣ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ನಿರಂಜನ್ ಮೂರ್ತಿ, ಡಯಟ್ ಪ್ರಾಂಶುಪಾಲರಾದ ಶ್ರೀ ಲಿಂಗರಾಜ್, ಜಿಎಂಎಸ್ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶ್ವೇತ ಮರಿಗೌಡರ್ ಮತ್ತು ಹಲವು ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳು ಮತ್ತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
