ನಟ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಎಸ್ ಎಸ್, ಎಸ್ ಎಸ್ವೆಂ ತೀವ್ರ ಸಂತಾಪ

ದಾವಣಗೆರೆ: ಕನ್ನಡ ಚಿತ್ರರಂಗದ ಪ್ರಸಿದ್ದ ನಟ ಪುನೀತ್ ರಾಜ್‍ಕುಮಾರ್ ಅವರ ನಿಧನಕ್ಕೆ ಮಾಜಿ ಸಚಿವರು, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಮಾಜಿ ಸಚಿವರಾದ ಎಸ್. ಎಸ್ . ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಅಗಲಿಕೆಯಿಂದ ಈ ರಾಜ್ಯದ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಮತ್ತವರ ಕುಟುಂಬ ವರ್ಗಕ್ಕೆ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ನೀಡಲಿ ಎಂದು ಅವರುಗಳು ಪ್ರಾರ್ಥಿಸಿದ್ದಾರೆ.
