ಹೊಸದುರ್ಗ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಸಂಘಟನೆಗೆ ತಯಾರಿ – ಹರೀಶ್ ಬಸಾಪುರ

ಚಿತ್ರದುರ್ಗ: ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಉಸ್ತುವಾರಿಗಳಾದ ಕೆ.ಎಲ್.ಹರೀಶ್ ಬಸಾಪುರ
ಹೊಸದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗವನ್ನು ಗ್ರಾಮ ಪಂಚಾಯತ್ ಮತ್ತು ಬೂತ್ ಮಟ್ಟದಲ್ಲಿ ಸಂಘಟಿಸುವ ಬಗ್ಗೆ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದರು.
ಸಭೆಯ ನಂತರ ಮಾಜಿ ಶಾಸಕರಾದ ಬಿ.ಜಿ. ಗೋವಿಂದಪ್ಪ ನವರನ್ನು ಭೇಟಿಯಾಗಿ ಚರ್ಚಿಸಿದರು, ಈ ಸಂದರ್ಭದಲ್ಲಿ ಹೊಸದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮದ್ ಇಸ್ಮಾಯಿಲ್, ಕೆಪಿಸಿಸಿ ಸದಸ್ಯ ಶಂಕರ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ವಾಸಿಂ, ಕಾರ್ಯಧ್ಯಕ್ಷ ಮೂಡಲಗಿರಿ, ಹೊಸದುರ್ಗ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ವಿನಯ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.