ಅಕ್ರಮ ಗಾಂಜಾ ಮಾರಾಟ ಅಡ್ಡೆಯ ಮೇಲೆ ದಾಳಿ ಗಾಂಜಾ ವಶ

ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಗಾಂಜಾ ವಶಕ್ಕೆ ಪಡೆದಿದ್ದಾರೆ.
ಎಸ್.ಎಸ್. ಆಸ್ಪತ್ರೆ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಹಿನ್ನೆಲೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಗಿರೀಶ್ ಬಿ.ವಿ ಮತ್ತು ಸಿಬ್ಬಂದಿ ತಂಡ ದಾಳಿ ನಡೆಸಿದೆ.
ಮೂವರು ಆರೋಪಿತಗಳನ್ನು ದಸ್ತಗಿರಿ ಮಾಡಿ, ಆರೋಪಿತರಿಂದ 01 ಕೆಜಿ 380 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತರ ವಿರುದ್ಧ ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.