ದಾವಣಗೆರೆ ತಾಲ್ಲೂಕಿನಲ್ಲಿ ನವೆಂಬರ್ 17 ರಂದು 32 ಸಾವಿರ ಕೊವಿಡ್ ಲಸಿಕೆ ಹಂಚಿಕೆ – ಡಾ. ಎಲ್ ಡಿ ವೆಂಕಟೇಶ್ ಮಾಹಿತಿ

ದಾವಣಗೆರೆ:ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ ನ. 17 ರಂದು ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಅಂದು ತಾಲ್ಲೂಕಿಗೆ ಒಟ್ಟು 32000 ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಯನ್ನು ಹಂಚಿಕೆ ಮಾಡಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.

ಇದೆ 17 ರಂದು ದಾವಣಗೆರೆ ನಗರ ವ್ಯಾಪ್ತಿಯಲ್ಲಿರುವ ಎಲ್ಲ 09 ನಗರ ಆರೋಗ್ಯ ಉಪಕೇಂದ್ರಗಳ ವ್ಯಾಪ್ತಿಯಲ್ಲಿ 18000 ಡೋಸ್ ಕೋವಿಶೀಲ್ಡ್ ಮತ್ತು 2000 ಡೋಸ್ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು.

ತಾಲ್ಲೂಕು ವ್ಯಾಪ್ತಿಯ ಎಲ್ಲ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 11500 ಡೋಸ್ ಕೋವಿಶೀಲ್ಡ್, ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ 500 ಡಓಸ್ ಕೋವಿಶೀಲ್ಡ್ ಸೇರಿದಂತೆ ಒಟ್ಟು 30 ಸಾವಿರ ಡೋಸ್ ಕೋವಿಶೀಲ್ಡ್ ಮತ್ತು 2 ಸಾವಿರ ಡೋಸ್ ಕೋವ್ಯಾಕ್ಸಿನ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ.

18 ವರ್ಷ ಮೇಲ್ಪಟ್ಟ ಎಲ್ಲರೂ ಕೂಡ ಕೋವಿಡ್ ನಿರೋಧಕ ಲಸಿಕೆಯನ್ನು ತಪ್ಪದೆ ಪಡೆದುಕೊಳ್ಳಬೇಕು. ಇದುವರೆಗೂ ಮೊದಲನೆ ಡೋಸ್ ಪಡೆಯದವರು ಹಾಗೂ ಈಗಾಗಲೆ ಮೊದಲನೆ ಡೋಸ್ ಪಡೆದು, ನಿಗದಿತ ಅವಧಿ ಪೂರ್ಣಗೊಂಡವರು ಎರಡನೆ ಡೋಸ್ ಲಸಿಕೆ ಪಡೆಯಬೇಕು.

ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ನಿರ್ಲಕ್ಷಿಸಿ, ಲಸಿಕೆ ಹಾಕಿಸಿಕೊಳ್ಳದಿದ್ದಲ್ಲಿ ಅಂತಹವರು ಸೋಂಕಿಗೆ ಒಳಗಾಗಿ ತೀವ್ರ ಆರೋಗ್ಯ ತೊಂದರೆಗೆ ಒಳಗಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಹಾಗೂ ತಪ್ಪು ಕಲ್ಪನೆಗಳಿಗೆ ಒಳಗಾಗದೆ, ಕೋವಿಡ್ ನಿರೋಧಕ ಲಸಿಕೆ ಪಡೆಯಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.

ದಾವಣಗೆರೆ ತಾಲ್ಲೂಕಿನಲ್ಲಿ ನವೆಂಬರ್ 17 ರಂದು 32 ಸಾವಿರ ಕೊವಿಡ್ ಲಸಿಕೆ ಹಂಚಿಕೆ – ಡಾ. ಎಲ್ ಡಿ ವೆಂಕಟೇಶ್ ಮಾಹಿತಿ

Leave a Reply

Your email address will not be published. Required fields are marked *

error: Content is protected !!