ಹೊನ್ನಾಳಿ ತಾಲ್ಲೂಕಿನಲ್ಲಿ ಮಳೆಯಿಂದ ಬೆಳೆಹಾನಿ ಪ್ರದೇಶಕ್ಕೆ ಸಂಸದ ಜಿಎಂ ಸಿದ್ದೇಶ್ವರ ಭೇಟಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆಹಾನಿಯಾದ ಬನ್ನಿಕೋಡು, ಕೂಲಂಬಿ, ನೆಲಹೊನ್ನೆ, ಕುಂದೂರು, ನೇರಲಗುಂಡಿ ಮತ್ತು ಬೇಲಿಮಲ್ಲೂರು ಗ್ರಾಮಗಳಿಗೆ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಷ್ಟವಾದ ಬೆಳೆಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ರೈತರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಚುನಾಯಿತ ಜನ ಪ್ರತಿನಿಧಿಗಳು, ಮುಖಂಡರು, ಗ್ರಾಮಸ್ಥರು ಹಾಗೂ ಇತರರು ಉಪಸ್ಥಿತರಿದ್ದರು.