ಸಂವಿಧಾನ ದಿನ’ ಪ್ರಸ್ತಾವನೆಯನ್ನು ಓದಿದ ಸಿಎಂ ಬಸವರಾಜ್ ಬೊಮ್ಮಾಯಿ

ದಾವಣಗೆರೆ: ಭಾರತ ದೇಶ 1949 ನವೆಂಬರ್ 26 ರಂದು ಲಿಖಿತ ಸಂವಿಧಾನವನ್ನು ಅಂಗೀಕರಿಸಿದ ದಿನ. ಸಂವಿಧಾನ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು.
ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ದಾವಣಗೆರೆ ಸಂಸದರಾದ ಶ್ರೀ ಜಿ.ಎಂ ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರಿ ಎಂ.ಪಿ ರೇಣುಕಾಚಾರ್ಯ, ಶಾಸಕರಾದ ಪ್ರೂ.ಲಿಂಗಣ್ಣ, ಶ್ರೀ ವೈ.ಎ.ನಾರಾಯಣ ಸ್ವಾಮಿ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಮೊದಲಾದವರು ಸಂವಿಧಾನ ದಿನ ಆಚರಣೆಯಲ್ಲಿ ಉಪಸ್ಥಿತರಿದ್ದರು.