61 ಕೆಜಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದ ಚನ್ನಗಿರಿ ಪೊಲೀಸ್ 3 ಜನ ಆರೋಪಿಗಳು ಪರಾರಿ

ದಾವಣಗೆರೆ: ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಸುಮಾರು 61 ಕೆಜಿ ಶ್ರೀಗಂಧದ ತುಂಡುಗಳನ್ನು ಚನ್ನಗಿರಿ ಪೊಲೀಸರು ವಶಕ್ಕೆ ಪಡೆದಿದ್ದು, ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನಗಿರಿ ಟೌನ್ ವಡ್ನಾಳ್ ರಾಜಣ್ಣ ಬಡಾವಣೆಯ ಬಳಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಕಳ್ಳತನ ಮಾಡಿಕೊಂಡು, ಚನ್ನಗಿರಿ ಟೌನ್ ಕಡೆಗೆ ಸಾಗಾಟ ಮಾಡಲಾಗುತ್ತಿತ್ತು.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿತರು ಶ್ರೀಗಂಧದ ತುಂಡುಗಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಚನ್ನಗಿರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಸಂತೋಷ್ ಕೆ.ಎಂ. ಮಾರ್ಗದರ್ಶನದಲ್ಲಿ ಚನ್ನಗಿರಿ ಠಾಣೆಯ ಪೊಲೀಸ್ ನಿರೀಕ್ಷಕ ಮಧು ಪಿ.ಬಿ. ಅವರು ಸಿಬ್ಬಂದಿಗಳ ತಂಡದೊಂದಿಗೆ ದಾಳಿ ನಡೆಸಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.