ನನಗೆ ಮುಖಂಡರ ಆರ್ಶೀವಾದ ಇದೆ.! ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್

ದಾವಣಗೆರೆ : ಗ್ರಾಮ ಪಂಚಾಯತಿ ಸದಸ್ಯನಾಗಿ 27 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಗುರುತಿಸಿಕೊಂಡಿದ್ದೇನೆ. ಸಿದ್ದರಾಮಯ್ಯ ಡಿಕೆಶಿ ಜಿ ಪರಮೇಶ್ವರ್ , ರಾಮಲಿಂಗರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರ ಆರ್ಶೀವಾದ ಇದೆ ಎಂದು ಚಿತ್ರದುರ್ಗ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ಹೇಳಿದರು.
ದಾವಣಗೆರೆ ನಗರದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಮಾತನಾಡಿ, ಕಳೆದ ಮೂರು ತಿಂಗಳಿನಿಂದ ಕ್ಷೇತ್ರದಲ್ಲೇ ಇದ್ದು ಸಮಸ್ಯೆಗಳ ಅರಿವು ಇದೆ. ಹೋದ ಕಡೆಯಲೆಲ್ಲಾ ಉತ್ತಮ ಬೆಂಬಲ ಇದ್ದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ಒಟ್ಟಾರೆ ವಿಧಾನ ಪರಿಷತ್ ಚುನಾವಣಾ ಕಣ ರಂಗೇರಿದ್ದುಘಿ, ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ಇದ್ದು ಗೆಲವು ಖಚಿತ ಎಂದ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ಹೇಳಿದರು.