ದಾವಣಗೆರೆಯಲ್ಲಿ ಕಿಡಿಕೇಡಿಗಳ ಕೃತ್ಯಕ್ಕೆ ಬಲಿಯಾಯ್ತು 22 ಅಡಿಕೆ ಗಿಡ
ದಾವಣಗೆರೆ: ತಾಲ್ಲೂಕಿನ ಅನಗೋಡು ಹೋಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಮ್ಮನೂರು ಗ್ರಾಮದಲ್ಲಿ ನಾಲ್ಕು ಎಕರೆ ಅಡಿಕೆ ತೋಟದಲ್ಲಿ ಬೆಳೆದಿದ್ದ22 ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ರಾತ್ರೋ ರಾತ್ರಿ ಕಡಿದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಕಾಶ್ ಎಂಬುವವರಿಗೆ ಸೇರಿದ ನಾಲ್ಕು ಎಕರೆ ಅಡಿಕೆ ತೋಟದಲ್ಲಿ ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದು, ದುಷ್ಕರ್ಮಿಗಳು ಯಾರೆಂಬುದು ಇದುವರೆಗೂ ತಿಳಿದುಬಂದಿಲ್ಲ.