ದಾವಣಗೆರೆ: ಜಿಲ್ಲಾ ಕ್ರಿಶ್ಚಿಯನ್ ವೆಲ್‌ಫೆರ್ ಅಸೋಸಿಯೇಷನ್ ಉಪಾಧ್ಯಕ್ಷ ಸ್ಥಾನಕ್ಕೆ ಎ. ಅಲೆಕ್ಸಾಂಡರ್ ಜಾನ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ರಿಶ್ಚಿಯನ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಫಾಸ್ಟರ್ ಬಿ. ರಾಜಶೇಖರ್ ಅವರು ಕ್ರಿಶ್ಚಿಯನ್ ಸಮುದಾಯದ ಒಪ್ಪಿಗೆ ಇಲ್ಲದೇ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದು ಖಂಡನೀಯ ಆಗಿರುವುದರಿಂದ ತಾವು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
