ದತ್ತಪೀಠದಲ್ಲಿ 100 ಅಡಿ ಕೆಳಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್ ಓರ್ವ ಬಾಲಕ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ 100 ಅಡಿ ಕೆಳಕ್ಕೆ ಉರುಳಿ ಬಿದ್ದಿರುವಘಟನೆ ದತ್ತಪೀಠ-ಮಾಣಿಕ್ಯಧಾರ ಮಾರ್ಗ ಮಧ್ಯೆ ನಡೆದಿದೆ. ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದಾನೆ.
ಮೊಹಮ್ಮದ್ ಸವಾಜ್ (6) ಮೃತ ಬಾಲಕ
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜನರು ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು. ಚಾಲಕನ ನಿಯಂತ್ರಣ ತಪ್ಪಿ ಬಸ್ವೊಂದು 100 ಅಡಿ ಕೆಳಕ್ಕೆ ಉರುಳಿ ಬಿದ್ದಿದೆ.
ಪರಿಣಾಮ ಬಸ್ಸಿನಲ್ಲಿದ್ದ 23ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, 6 ಮಂದಿ ಪ್ರಯಾಣಿರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಂಭೀರವಾಗಿ ಗಾಯಾಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.