ಹುಬ್ಬಳ್ಳಿಯಲ್ಲಿ ​ ಕಾರ್ಪೊರೇಟರ್​ ಪುತ್ರಿ ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬರ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ ಮೃತದೇಹವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ‌ ಮುಗಿಲು ಮುಟ್ಟಿದೆ.

ಕೊಲೆಯಾದ ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಆರೋಪಿ ಫಯಾಜ್‌ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದನು. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದು, ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

 

Leave a Reply

Your email address will not be published. Required fields are marked *

error: Content is protected !!