ಬೆಂಗಳೂರು: ನೇಕಾರ ಸಮುದಾಯದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಅವರನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿಕಛೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗ ಸಿಎಂ ಗೆ ಚರಕದಂತಹ ಒಂದು ನನಪಿನ ಕಾಣಿಕೆ ನೀಡಿ ಗೌರವಿಸಿದರು. ಜೊತೆಗೆ ತಮ್ಮ ಸಮಸ್ಯೆಗಳ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದರು.
ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಹಂಪಿ ಗಾಯತ್ರಿ ಪೀಠದ ಶ್ರೀ ದಯಾನಂದಪುರಿ ಸ್ವಾಮೀಜಿ, ತಪಸಿಹಳ್ಳಿ ದಿವ್ಯಜ್ಞಾನಾನಂದ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಶ್ರೀ ಘನಲಿಂಗ ಸ್ವಾಮೀಜಿ, ಧಾರವಾಡದ ಶಿವಾನಂದ ಮಠದ ಶಿವಾನಂದ ಸ್ವಾಮಿಗಳು, ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಬಿ.ಎಸ್. ಸೋಮಶೇಖರ ಮತ್ತಿತರ ನೇಕಾರ ಮುಖಂಡರು ನಿಯೋಗದ ಪರವಾಗಿ ಹಾಜರಿದ್ದರು.
