ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

A grand welcome for Prime Minister Modi in Bengaluru

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ ರಾಜಧಾನಿ ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಿ ಒಂದೇ ದಿನ 6 ಪ್ರಮುಖ ಯೋಜನಗಳಿಗೆ ಚಾಲನೆ ನೀಡಲಿದ್ದಾರೆ. ಬಿಐಇಸಿ ಕೇಂದ್ರದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ಇವತ್ತಿನ ಮೋದಿ ಪ್ಲ್ಯಾನ್ ಏನಿರುತ್ತೆ..?
ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್ನಲ್ಲಿ ನಿರ್ಮಾಣವಾಗಿರುವ ಎಚ್ಎಎಲ್ ಲಘು ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಇದು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಆತ್ಮನಿರ್ಭರತೆಯ ಮತ್ತೊಂದು ಹೆಜ್ಜೆ ಎಂದೇ ಬಣ್ಣಿಸಲಾಗುತ್ತಿದೆ. ಅದೇ ವೇದಿಕೆಯಲ್ಲಿಯೇ ಪೆಟ್ರೋಲ್ಗೆ ಶೇಕಡಾ 20ರಷ್ಟು ಎಥಾನಾಲ್ ಮಿಶ್ರಣ ಮಾಡಿ ಸಿದ್ಧಪಡಿಸಲಾಗಿರುವ ಇ-20 ಪೆಟ್ರೋಲ್ ಅನ್ನು ದೇಶದ ವಿವಿಧ ರಾಜ್ಯಗಳ 67 ಪೆಟ್ರೋಲ್ ಬಂಕ್ಗಳಲ್ಲಿ ಪ್ರಾಯೋಗಿಕವಾಗಿ ವಿತರಣೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಒಂದು ಬಾರಿ ಬಳಸಿ ಬಿಸಾಡುವ ಹಳೇ ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯದಿಂದ ತಯಾರಿಸಿದ ಸಮವಸ್ತ್ರ ಅನಾವರಣ ಮಾಡಲಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ. ಹೆಲಿಪ್ಯಾಡ್ ಮೂಲಕ ಮಾದವಾರ ಲ್ಯಾಂಡ್ ಆಗಲಿದ್ದು ನಂತರ 2:30 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಜನ, 650ಕ್ಕೂ ಹೆಚ್ಚು ಪ್ರಾಯೋಜಕರು, 8,000 ಹೊರ ದೇಶದ ಪ್ರತಿನಿಧಿಗಳು, 500ಕ್ಕೂ ಹೆಚ್ಚು ಭಾಷಣಕಾರರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಹಾಲ್ ಎರಡರ ಉದ್ಘಾಟನೆ, ನಂತರ ದೇಶ ಸೇರಿದಂತೆ ವಿದೇಶಿ ಗಣ್ಯರ ಜೊತೆಗೆ ಸಮಾಲೋಚನೆ ಮಾಡಲಿದ್ದಾರೆ.
ರಾಜ್ಯ ಹಾಗೂ ತುಮಕೂರು ಜಿಲ್ಲೆಯ ಹಿರಿಮೆಗೆ ಇನ್ನೊಂದು ಗರಿಯಾಗಿರುವ ಎಚ್ಎಎಲ್ ಲಘು ಹೆಲಿಕಾಪ್ಟರ್ ಘಟಕಕ್ಕೆ 2016 ಜ.3 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಅವಧಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಅವರೇ ಉದ್ಘಾಟನೆ ಮಾಡುತ್ತಿರುವುದು ವಿಶೇಷ. ಬಿದರೆಹಳ್ಳಿ ಕಾವಲ್ನಲ್ಲಿ615 ಎಕರೆ ಜಾಗದಲ್ಲಿಎಚ್ಎಎಲ್ ಲಘು ಹೆಲಿಕಾಪ್ಟರ್ ಘಟಕ ಸ್ಥಾಪನೆಯಾಗಿದೆ. 6,400 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!