ಒಂದೇ ಗಂಟೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ ಮಹಾತಾಯಿ

ಮಹಿಳೆಯೊಬ್ಬಳು 1 ಗಂಟೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆಯೊಂದು ಪಾಕಿಸ್ತಾನದಲ್ಲಿ ವರದಿಯಾಗಿದೆ.

ಪಾಕಿಸ್ತಾನದ ರಾವಲ್ಪಿಂಡಿಯ ಹಾಜಿರಾ ಕಾಲೋನಿಯಲ್ಲಿ ನೆಲೆಸಿರುವ ಮೊಹಮ್ಮದ್ ವಹೀದ್ ಅವರ ಪತ್ನಿ ಜೀನತ್ ವಹೀದ್ ಎಂಬುವವರು 1 ಗಂಟೆ ಅವಧಿಯಲ್ಲಿ ಆರು ಶಿಶುಗಳಿಗೆ ಜನ್ಮ ನೀಡಿದ್ದಾರೆ.

ವಿಶೇಷವೆಂದರೆ, ಹೆರಿಗೆ ನೋವಿನಿಂದ ಗುರುವಾರ ರಾತ್ರಿ ಜೀನತ್ ವಹೀದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವ್ಯಾಪಕವಾದ ಕಾರ್ಯಾಚರಣೆಯ ನಂತರ, ಮಹಿಳೆಯು ಆರು ಮಕ್ಕಳಿಗೆ ಜನ್ಮ ನೀಡಿದಳು. ತಾಯಿ ಸೇರಿದಂತೆ ಎಲ್ಲಾ ಶಿಶುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಶಿಶುಗಳು ತಲಾ ಎರಡು ಪೌಂಡ್‌ಗಳಿಗಿಂತ ಕಡಿಮೆ ತೂಕವನ್ನು ಹೊಂದಿರುವುದಾಗಿ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!