ಆನಗೋಡು ಗ್ರಾಮದ ಬಳಿ ವಾಹನಕ್ಕೆ ಸಿಲುಕಿ ಚಿರತೆ ಸಾವು

A leopard died after being hit by a vehicle near Anagodu village

ವಾಹನಕ್ಕೆ ಸಿಲುಕಿ ಚಿರತೆ ಸಾವು

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಆನಗೋಡು ಗ್ರಾಮದ ಬಳಿ ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿದೆ.
ತಡರಾತ್ರಿ ಈ ಘಟನೆ ನಡೆದಿದ್ದು, ಚಿರತೆಯೊಂದು ರಸ್ತೆ ದಾಟುವಾಗ ಈ ಅಪಘತ ನಡೆದಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಚಿರತೆ ಸ್ಥಳದಲ್ಲೇ ಮೃತ ಪಟ್ಟಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇತ್ತೀಚೆಗೆ ಆನಗೋಡು ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು. ಇದೀಗ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಪೋಲೀಸ್ ಠಾಣೇ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!