ವಿಧಾನಸಭಾ ಚುನಾವಣೆಯಲ್ಲಿ ಪಾಠ; ಬಿಜೆಪಿ ಸರ್ಕಾರಕ್ಕೆ ‘ಪಂಚಮಸಾಲಿ’ ಎಚ್ಚರಿಕೆ

A lesson in assembly elections; 'Panchamasali' warning to BJP government

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾದೀತು ಎಂದು ಬಿಜೆಪಿ ಸರ್ಕಾರಕ್ಕೆ ಪಂಚಮಸಾಲಿ ಸಮುದಾಯ ಎಚ್ಚರಿಕೆ ನೀಡಿದೆ.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಬಗ್ಗೆ ಆಕ್ರೋಶ ಹೊರಹಾಕಿರುವ ಜಯಮೃತ್ಯುಂಜಯ ಶ್ರೀಗಳು, ರಾಜ್ಯ ಸರ್ಕಾರವು ಸಂಪುಟದಲ್ಲಿ ಕೈಗೊಂಡಿರುವ ತೀರ್ಮಾನವನ್ನು ನಮ್ಮ ಸಮುದಾಯ ಒಪ್ಪಿಲುತ್ತಿಲ್ಲ ಎಂದಿದ್ದಾರೆ

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಮೀಸಲಾತಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಕಾರ್ಯಕಾರಣಿಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿರುವ ಅವರು, ಸಿಎಂ ಬಸವರಾಜ ಬೊಮ್ಮಾಯಿಯವರು ತಾಯಿ ಮೇಲೆ ಆಣೆ ಮಾಡಿ ಹೇಳಿದ್ದರು. ಆದರೆ ಅವರು ನುಡಿದಂತೆ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಂಪುಟದ ನಿರ್ಣಯವನ್ನು ನಮ್ಮ ರಾಜ್ಯ ಕಾರ್ಯಕಾರಿಣಿ ಸಭೆ ತಿರಸ್ಕಾರ ಮಾಡಿದೆ. ಜನವರಿ 12ರೊಳಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸದಿದ್ದರೆ, ಜ.13ರಂದು ಸಿಎಂ ಕ್ಷೇತ್ರ ಶಿಗ್ಗಾಂವಿಯಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು‌ ತಿಳಿಸಿದರು.

ಸಂಪುಟದ ನಿರ್ಧಾರವನ್ನು ನಮ್ಮ ಸಮುದಾಯದವರು ಮಾತ್ರವಲ್ಲ, ಯಾವುದೇ ಶಾಸಕರು ಸಮಾಧಾನಗೊಂಡಿಲ್ಲ ಎಂದ ಅವರು, ನಮ್ಮ ಹೋರಾಟ ನಿಲ್ಲಲ್ಲ, ಜನ ಶಕ್ತಿಯಿಂದಲೇ 2023ರ ಚುನಾವಣೆಯಲ್ಲಿ ಪರಿಣಾಮ ಗೊತ್ತಾಗುತ್ತ ಎಂಬ ಎಚ್ಚರಿಕೆಯನ್ನು ಅವರು ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!