ಉಕ್ರೇನ್‌ನಲ್ಲಿದ್ದ ಕನ್ನಡಿಗ ವಿದ್ಯಾರ್ಥಿ ರಷ್ಯಾ ಶೆಲ್ ದಾಳಿಗೆ ಬಲಿ
ಉಕ್ರೇನ್ : ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದಾರೆ. ಉಕ್ರೇನ್ ಖರ್ಕೀವ್‌ನಲ್ಲಿ ಇಂದು ಬೆಳಗ್ಗೆ 10 ಗಂಟೆ ನಡೆದ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಈತ ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದವನು ಎಂದು ಗುರುತಿಸಲಾಗಿದೆ. ಈ ಕುರಿತು ವಿದೇಶಾಂಗ ಇಲಾಖೆ ಟ್ವೀಟ್ ಮಾಡಿದ್ದು, ಭಾರತೀಯ ವಿದ್ಯಾರ್ಥಿಯೋರ್ವ ಖರ್ಕೀವ್‌ನಲ್ಲಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬದೊAದಿಗೆ ಸಂಪರ್ಕದಲ್ಲಿದ್ದು, ವಿದ್ಯಾರ್ಥಿ ನಿಧನಕ್ಕೆ ಸಚಿವಾಲಯ ಸಂತಾಪ ಸೂಚಿಸಿದೆ ಎಂದು ಹೇಳಿದೆ.